ಬೆಂಗಳೂರು: ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಶಿರಾ ಹಾಗೂ ಆರ್.ಆರ್ ನಗರ ಉಪಚುನಾವಣಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರದ ಅಬ್ಬರ ನಿಂತಿದೆ. ಕಳೆದ ಎರಡು ವಾರಗಳಿಂದ ನಡೆಯುತ್ತಿದ್ದ ಆರೋಪ, ಪ್ರತ್ಯಾರೋಪ, ರೋಡ್‍ಶೋಗಳ ಸದ್ದು ಈಗಿಲ್ಲ. ಆದರೆ, ಇಂದು ಮನೆ ಮನೆಗೆ ತೆರಳಿ ಅಭ್ಯರ್ಥಿಗಳು ಮತಯಾಚನೆ ನಡೆಸಲಿದ್ದಾರೆ. ನಾಳೆ ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಕೊರೊನಾದಿಂದ ಸತ್ಯಾನಾರಾಯಣ ಅವರ ಅಕಾಲಿತ ಸಾವಿನಿಂದ ತೆರವಾಗಿರುವ ಶಿರಾ ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದೆ. ಅದೇ ರೀತಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಅವರ ರಾಜೀನಾಮೆಯಿಂದ ತೆರವಾಗಿರುವ ಆರ್.ಆರ್ ನಗರದಲ್ಲಿ ನಾಳೆ ಚುನಾವಣೆ ನಡೆಯಲಿದೆ.
ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ, ಬಿಜೆಪಿಯ ರಾಜೇಶ್‍ಗೌಡ ಹಾಗೂ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಮನೆ ಮನೆಗೆ ತೆರಳಿ ಮತಯಾಚನೆ ಮಾಡಲಿದ್ದಾರೆ.
ಆದೇ ರೀತಿ ಆರ್.ಆರ್ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಜ್ಞಾನಭಾರತಿ, ಲಗ್ಗೆರೆ ವಾರ್ಡ್‍ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕೂಡ ಬೆಳಿಗ್ಗೆ 10 ಗಂಟೆಗೆ ಮನೆ ಮನೆಗೆ ತೆರಳಿ ಮತ ಕೇಳಲಿದ್ದಾರೆ. ಕಮಲ ಅಭ್ಯರ್ಥಿ ಮುನಿರತ್ನ ಕೂಡ ಮನೆ ಮನೆಗೆ ತೆರಳಿದ್ದಾರೆ.
ಮತದ ರೂಪದಲ್ಲಿ ಅರಿಶಿನ, ಕುಂಕುಮದ ಭಿಕ್ಷೆ ನೀಡಿ;ಕುಸುಮಾ
ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಇರುವಾಗಲೇ ನಾನು ಕಳೆದ ಐದು ವರ್ಷಗಳ ಹಿಂದೆ ಕಳೆದುಕೊಂಡಿರುವ ಅರಿಶಿಣ-ಕುಂಕುಮವನ್ನು ಮತದ ರೂಪದಲ್ಲಿ ಭಿಕ್ಷೆಯಾಗಿ ನೀಡಿ. ನನ್ನ ಉಳಿದ ಬದುಕನ್ನು ನಿಮ್ಮ ಸೇವೆಗೆ ಮುಡಿಪಾಗಿಡುತ್ತೇನೆ ಎಂದು ಆರ್.ಆರ್ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮನವಿ ಮಾಡಿದ್ದರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಕುಸುಮಾ, ನಿಂದನೆ, ಅಪನಿಂದನೆಗಳಿಂದ ನೊಂದಿರುವ ನಿಮ್ಮ ಮನೆಯ ಮಗಳನ್ನು ಮತದ ರೂಪದಲ್ಲಿ ಉಡಿತುಂಬಿ ಹಾರೈಸಲಿದ್ದೀರಿ ಎಂಬ ನಂಬಿಕೆ ನನಗಿದೆ. ನನ್ನ ಜೀವನವನ್ನು ನಿಮ್ಮ ಸೇವೆಗೆ ಮೀಸಲಿಟ್ಟು ಋಣ ತೀರಿಸುವೆ ಎಂದು ಕುಸುಮಾ ಹೇಳಿಕೊಂಡಿದ್ದಾರೆ.
ಕಳೆದ 20 ದಿನಗಳಿಂದ ನನ್ನ ಜೀವನದಲ್ಲಿ ಆಗಿರುವ ಬದಲಾವಣೆಗಳು ಎಲ್ಲರಿಗೂ ಗೊತ್ತಿದೆ. ನನ್ನ ಹೆಸರು ಚುನಾವಣೆಗೆ ಮುನ್ನಲೆಗೆ ಬರುತ್ತಿದ್ದಂತೆ ಟೀಕೆ, ಗದಾಪ್ರಹಾರ ನಡೆಯುತ್ತಲೇ ಇದೆ. ನನ್ನ ಗಂಡನ ಹೆಸರು ಬಳಸಬಾರದು ಎಂದು ಎನ್ನತ್ತಲ್ಲೇ ನನ್ನ ಮೇಲೆ ಸುಳ್ಳು ಕೇಸ್ ಹಾಕಲಾಗಿದೆ.
ನನ್ನ ಬಗ್ಗೆ ಚುಚ್ಚು ಮಾತುಗಳಲ್ಲಿ ಮಾತನಾಡಿರುವ ಮುನಿರತ್ನ ಅಣ್ಣನವರೇ ನಾನು ನಿಮಗೇನು ಅನ್ಯಾಯ ಮಾಡಿದ್ದೆಎ ಎಂದು ಕುಸುಮಾ ಪ್ರಶ್ನಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel