ಬೆಂಗಳೂರು: ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಅಂತಿಮಘಟ್ಟಕ್ಕೆ ಬಂದಿದ್ದು, ಮೊದಲ ಸುತ್ತಿನಿಂದಲೂ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸುತ್ತಾ ಬಂದಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ಸನಿಹದಲ್ಲಿದ್ದು, ಕಮಲ ಪಡೆ ವಿಜಯೋತ್ಸವಕ್ಕೆ ಭರ್ಜರಿ ತಯಾರಿ ನಡೆಸಿದೆ.
ಈ ನಡುವೆ, ಆರ್.ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವು ಸಾಧಿಸಲಿದ್ದಾರೆ. ಮುನಿರತ್ನ ಬಹುದೊಡ್ಡ ಅಂತರದಿಂದ ಗೆಲ್ಲಲಿದ್ದಾರೆ. ಇದೊಂದು ವಿರೋಚಿತ ಗೆಲುವು ಆಗಲಿದೆ. ಡಿ.ಕೆ.ಶಿವಕುಮಾರ್ ಅವರು ಆರ್.ಆರ್.ನಗರ ಉಪಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದರು. ನಾನು ಸಹ ಅವರ ವಿರುದ್ಧ ಕ್ಷೇತ್ರವನ್ನು ಸವಾಲಾಗಿ ಸ್ವೀಕರಿಸಿದ್ದೆ. ಇದೀಗ ಬಹುದೊಡ್ಡ ಅಂತರದಲ್ಲಿ ನಾವು ಗೆಲುವು ಸಾಧಿಸುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ಆದ್ರೆ ಕಾಂಗ್ರೆಸ್ನದ್ದು ಮನೆಯೊಂದು ಮೂರು ಬಾಗಿಲು ಸ್ಥಿತಿಯಾಗಿದೆ ಎಂದು ಅಶೋಕ್ ಲೇವಡಿ ಮಾಡಿದ್ದಾರೆ.
ಆರ್.ಆರ್ ನಗರದಲ್ಲಿ 35 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಈ ಚುನಾವಣೆ ಗೆಲುವು ಮುಂದಿನ ಬಿಬಿಎಂಪಿ ಚುನಾವಣೆ ಗೆಲುವಿಗೆ ಮುನ್ನುಡಿಯಾಗಲಿದೆ. ಬಿಬಿಎಂಪಿ ಚುನಾವಣೆಯನ್ನ ಬಿಜೆಪಿಯೇ ಗೆಲ್ಲಲಿದೆ ಎಂದರು.
ಬಿಜೆಪಿ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಆರ್.ಆಶೋಕ್, ನಾಯಕತ್ವ ಬದಲಾಗುತ್ತೆ. ಆದರೆ ಯಡಿಯೂರಪ್ಪ ಅವರದಲ್ಲ, ಸಿದ್ದರಾಮಯ್ಯ ಅವರದ್ದು. ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತರೆ ಸಿದ್ದರಾಮಯ್ಯ ಅವರ ನಾಯಕತ್ವವೇ ಪ್ರಶ್ನೆಯಾಗಿ ಉಳಿಯುತ್ತದೆ. ಯಾರನ್ನ ನಾಯಕತ್ವದಿಂದ ತೆಗೆಯುತ್ತಾರೋ ಗೊತ್ತಾಗುತ್ತೆ ಎಂದು ಅಶೋಕ್ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel