ಬೆಂಗಳೂರು : ರಾಜ್ಯದಲ್ಲಿ ಉಪಚುನಾವಣೆ ಕಾವು ಹೆಚ್ಚಾಗುತ್ತಿದೆ.
ಆರ್ ಆರ್ ನಗರ, ಶಿರಾ ಉಪಚುನಾವಣೆಯಲ್ಲಿ ಗೆಲುವಿನ ಕೇಕೆ ಹಾಕಿ ಬಿಜೆಪಿಗೆ ಟಕ್ಕರ್ ನೀಡಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ.
ಅದರಲ್ಲೂ ಆರ್ ಆರ್ ನಗರವನ್ನು ಕಾಂಗ್ರೆಸ್ ತೆಕ್ಕೆಗೆ ಹಾಕಿಕೊಳ್ಳಲು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾನಾ ತಂತ್ರಗಳನ್ನು ರೂಪಿಸುತ್ತಿದ್ದಾರೆ.
‘ಕೈ’ ಬಿಟ್ಟು ಕಮಲ ಹಿಡಿದಿರುವ ಮುನಿರತ್ನಗೆ ಬಿಜೆಪಿ ಟಿಕೆಟ್ ಪಕ್ಕಾ ಆಗಿದ್ದು, ಇವರ ಎದುರು ಹೊಸ ಕ್ಯಾಂಡಿಟೇಟ್ ನಿಲ್ಲಿಸಲು ಕಾಂಗ್ರೆಸ್ ಪಡೆ ಸಜ್ಜಾಗಿದೆ.
ಕುಸುಮಾಗೆ ಕಾಂಗ್ರೆಸ್ ಟಿಕೆಟ್
ಇದನ್ನೂ ಓದಿ : ಕಾಂಗ್ರೆಸ್ ಸೇರ್ಪಡೆಗೊಂಡ ಡಿ.ಕೆ.ರವಿ ಪತ್ನಿ ಕುಸುಮಾ
ದಿವಗಂತ ಡಿ.ಕೆ ರವಿ ಅವರ ಪತ್ನಿ ಕುಸುಮ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇದರೊಂದಿಗೆ ಆರ್. ಆರ್. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕುಸುಮಾ ರವಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಆದರೂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ ಮುಂತಾದವರು ಸೇರಿ ಅಭ್ಯರ್ಥಿಯ ಬಗ್ಗೆ ಅಂತಿಮ ನಿರ್ಧಾರ ಮಾಡಲಿದ್ದಾರೆ.
ನಂತರ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮವಾಗಿ ಘೋಷಣೆ ಮಾಡಲಿದ್ದಾರೆ.








