RR vs CSK Match | ರಾಯಲ್ಸ್ – ಚೆನ್ನೈ ತಂಡ ಹೆಡ್ ಟು ಹೆಡ್ ರೆಕಾರ್ಡ್
ಸಂಜು ಸ್ಯಾಮ್ಸನ್ ನಾಯಕತ್ವ ರಾಜಸ್ಥಾನ್ ರಾಯಲ್ಸ್ ಮತ್ತು ಎಂ.ಎಸ್.ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ತಮ್ಮ ಕೊನೆಯ ಪಂದ್ಯವನ್ನಾಡಲಿದೆ. ಅಂದರೇ 15 ನೇ ಸೀಸನ್ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ತಮ್ಮ 14 ನೇ ಪಂದ್ಯವನ್ನಾಡಲಿವೆ. ಈ ಉಭಯ ತಂಡಗಳ ನಡುವಿನ ಪಂದ್ಯದಲ್ಲಿ ಈ ಸೀಸನ್ ನ 68 ನೇ ಮ್ಯಾಚ್ ಆಗಿದೆ.
ಮುಂಬೈನ ಬ್ರೆಬೊರ್ನ್ ಮೈದಾನದಲ್ಲಿ ಇಂದಿನ ಪಂದ್ಯ ನಡೆಯಲಿದೆ. ಈ ಪಂದ್ಯ ರಾಜಸ್ಥಾನ್ ರಾಯಲ್ಸ್ ಗೆ ತುಸು ಮಹತ್ವದ್ದಾಗಿದೆ. ಆದ್ರೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇಂದಿನ ಪಂದ್ಯ ಅಷ್ಟೊಂದು ಮಹತ್ವದ ಮ್ಯಾಚ್ ಆಗಿಲ್ಲ. ಹೀಗಾಗಲೇ ಪ್ಲೇ ಆಫ್ಸ್ ಎಂಟ್ರಿ ಪಡೆದಿರುವ ರಾಜಸ್ಥಾನ್ ತಂಡ ಇಂದಿನ ಪಂದ್ಯ ಗೆದ್ದು ಪ್ಲೇ ಆಫ್ಸ್ ಅಧಿಕೃತಪಡಿಸಿಕೊಳ್ಳುವ ತವಕದಲ್ಲಿದೆ. ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಕೊನೆಯಲ್ಲಿ ಪಂದ್ಯದಲ್ಲಿ ಗೆದ್ದು ಗೆಲುವಿನೊಂದಿಗೆ ಟೂರ್ನಿಯ ಅಭಿಯಾನ ಮುಗಿಸುವ ಪ್ಲಾನ್ ಮಾಡಿಕೊಂಡಿದೆ.
ಎರಡೂ ತಂಡಗಳ ಹೆಡ್ ಟು ಹೆಡ್ ರಿಕಾರ್ಡ್ ನೋಡೋದಾದ್ರೆ

ಉಭಯ ತಂಡಗಳು ಇಂಡಿಯನ್ ಪ್ರಿಮಿಯರ್ ಲೀಗ್ ಇತಿಹಾಸದಲ್ಲಿ ಈವರೆಗೂ 26 ಪಂದ್ಯಗಳನ್ನಾಡಿವೆ. ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 11 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿದೆ. ಕಳೆದ ಐದು ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಮೇಲು ಗೈ ಸಾಧಿಸಿದ್ದು, ಮೂರು ಪಂದ್ಯಗಳಲ್ಲಿ ಗೆದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಎರಡು ಪಂದ್ಯಗಳಲ್ಲಿ ಗೆದ್ದಿದೆ. ಕಳೆದ ವರ್ಷದ ಐಪಿಎಲ್ ನಲ್ಲಿ ಎರಡೂ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಗೆದ್ದಿವೆ
ಅಂದಹಾಗೆ ಮೊದಲು ಬ್ಯಾಟಿಂಗ್ ಮಾಡಿದಾಗ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬರೋಬ್ಬರಿ 8 ಬಾರಿ ಗೆಲುವು ಸಾಧಿಸಿದ್ದರೇ ನಾಲ್ಕು ಬಾರಿ ರಾಜಸ್ಥಾನ್ ರಾಯಲ್ಸ್ ಗೆದ್ದಿದೆ. ಚೇಸಿಂಗ್ ಮಾಡಿದಾಗಿ ಎರಡೂ ತಂಡಗಳು ತಲಾ ಏಳು ಬಾರಿ ಗೆದ್ದಿವೆ.
ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಈ ಸೀಸನ್ ನಲ್ಲಿ 13 ಪಂದ್ಯಗಳನ್ನಾಡಿ ಎಂಟು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ರಾಯಲ್ಸ್ ತಂಡ 16 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇತ್ತ ಧೋನಿ ನಾಯಕತ್ವ ಚೆನ್ನೈ ಸೂಪರ್ ಕಿಂಗ್ಸ್ ತಂಡ 13 ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಎಂಟು ಅಂಕಗಳೊಂದಿಗೆ ಒಂಭತ್ತನೇ ಸ್ಥಾನದಲ್ಲಿದೆ.
ಕಳೆದ ಪಂದ್ಯಗಳ ರಿಸಲ್ಟ್ ಬಗ್ಗೆ ಮಾತನಾಡೋದಾದ್ರೆ.. ರಾಜಸ್ಥಾನ್ ರಾಯಲ್ಸ್ ತಂಡ ಕಳೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಿತ್ತು. ಈ ಪಂದ್ಯದಲ್ಲಿ ರಾಜಸ್ಥಾನ್ ತಂಡ 24 ರನ್ ಗಳಿಂದ ಜಯ ಸಾಧಿಸಿದೆ. ಮತ್ತೊಂದು ಕಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಸೆಣಸಿತ್ತು. ಇದರಲ್ಲಿ ಚೆನ್ನೈ ತಂಡ ಏಳು ವಿಕೆಟ್ ಗಳಿಂದ ಸೋಲು ಕಂಡಿದೆ.








