RR-vs-KKR-30th-match | ಹೆಡ್ ಟು ಹೆಡ್ ರೆಕಾರ್ಡ್
ಮುಂಬೈನ ಬ್ರೆಬೊರ್ನ್ ಅಂಗಳದಲ್ಲಿ ಇಂದು ಕೆಕೆಆರ್ ವರ್ಸಸ್ ಆರ್ ಆರ್ ತಂಡಗಳು ಕಾದಾಟ ನಡೆಸಲಿವೆ.
15ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ 30ನೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮತ್ತು ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಟೂರ್ನಿಯ ಹಿಂದಿನ ಪಂದ್ಯದಲ್ಲಿ ಕೆಕೆಆರ್ ಮತ್ತು ರಾಜಸ್ತಾನ ರಾಯಲ್ಸ್ ತಂಡಗಳು ಸೋತಿವೆ.
ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳು ಸಹಜವಾಗಿಯೇ ಗೆಲುವನ್ನು ಎದುರು ನೋಡುತ್ತಿವೆ. ಕೆಕೆಆರ್ ಆಡಿರುವ ಆರು ಪಂದ್ಯಗಳಲ್ಲಿ ತಲಾ ಮೂರು ಗೆಲುವು ಮತ್ತು ಸೋಲುಗಳನ್ನು ಕಂಡಿದೆ.
ಅಂಕ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಇನ್ನು ರಾಜಸ್ತಾನ ರಾಯಲ್ಸ್ ಈ ಬಾರಿ ಉತ್ತಮವಾದ ಪ್ರದರ್ಶನವನ್ನೇ ನೀಡಿದೆ.
ಆಡಿರುವ ಐದು ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಎರಡು ಸೋಲುಗಳನ್ನು ಕಂಡಿದ್ದು, ಅಂಕ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
ಈವರೆಗಿನ ಹೆಡ್ ಟು ಹೆಡ್ ರೆಕಾರ್ಡ್ ನೋಡೊದಾದ್ರೆ
ಐಪಿಎಲ್ ನಲ್ಲಿ ಕೆಕೆಆರ್ ಮತ್ತು ರಾಜಸ್ತಾನ ರಾಯಲ್ಸ್ ತಂಡಗಳು ಇಲ್ಲಿಯವರೆಗೆ 25 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ.
ಇದರಲ್ಲಿ ಕೆಕೆಆರ್ ತಂಡ 13 ಪಂದ್ಯಗಳನ್ನು ಗೆದ್ದುಕೊಂಡ್ರೆ, ರಾಜಸ್ತಾನ ರಾಯಲ್ಸ್ ತಂಡ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯದಲ್ಲಿ ಫಲಿತಾಂಶ ಬಂದಿಲ್ಲ.
ಇನ್ನು ಕಳೆದ ಬಾರಿಯ ಐಪಿಎಲ್ ನಲ್ಲಿ ರಾಜಸ್ತಾನ ರಾಯಲ್ಸ್ ಮತ್ತು ಕೆಕೆಆರ್ ತಂಡಗಳು ತಲಾ ಒಂದೊಂದು ಪಂದ್ಯಗಳಲ್ಲಿ ಜಯ ಸಾಧಿಸಿವೆ. rr-vs-kkr-30th-match-Head to Head Record









