RR vs RCB preview | ಆರ್ ಸಿಬಿಯ ಸಂಭಾವ್ಯ ಪ್ಲೇಯಿಂಗ್ 11
ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಅತ್ಯಂತ ಹೀನಾಯವಾಗಿ ಸೋಲು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸುತ್ತಿದೆ.
15 ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯಲಿದೆ.
ಈ ಆವೃತ್ತಿಯಲ್ಲಿ ರಾಯಲ್ ಮತ್ತು ರಾಯಲ್ ಚಾಲೆಂಜರ್ಸ್ ತಂಡಗಳು ಎರಡನೇ ಬಾರಿಗೆ ಗುದ್ದಾಡಲಿವೆ. ಕಳೆದ ಬಾರಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ಆರ್ ಸಿಬಿ ತಂಡ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ಆರ್ ಸಿಬಿ ಪರ ಶಹಬ್ಬಾಸ್ ಅಹ್ಮದ್ 45 ರನ್, ದಿನೇಶ್ ಕಾರ್ತಿಕ್ 44 ರನ್ ಗಳಿಸಿದ್ದರು. ರಾಯಲ್ಸ್ ಪರ ಜೋಸ್ ಬಟ್ಲರ್ 70 ರನ್, ಹಿಟ್ಮೇಯರ್ 42 ರನ್ ಸಿಡಿಸಿದ್ದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡ ಮೂರನೇ ಸ್ಥಾನದಲ್ಲಿದೆ. ಬೆಂಗಳೂರು ತಂಡ ಈ ಆವೃತ್ತಿಯಲ್ಲಿ ಎಂಟು ಪಂದ್ಯಗಳನ್ನಾಡಿದ್ದು, ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಮೂರು ಪಂದ್ಯಗಳಲ್ಲಿ ಸೋತಿದೆ.
ಬೆಂಗಳೂರು ತಂಡ ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ ಆರ್ ಸಿಬಿ 9 ವಿಕೆಟ್ ಗಳಿಂದ ಸೋತಿದೆ.
ರಾಯಲ್ ಚಾಲೆಂಜರ್ಸ್ ತಂಡಕ್ಕೆ ಸಾಂಘೀಕ ಆಟವೇ ಬಲವಾಗಿದೆ. ಆದ್ರೆ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ವಿಭಾಗ ಕುಸಿದಿತ್ತು. ಪ್ರಮುಖವಾಗಿ ಆರ್ ಸಿಬಿಗೆ ಟಾಪ್ ಆರ್ಡರ್ ಸಮಸ್ಯೆ ಕಾಣುತ್ತಿದೆ. ಅನೂಜ್ ರಾವತ್, ವಿರಾಟ್ ಕೊಹ್ಲಿ ಸ್ಥಿರ ಆಟದ ಪ್ರದರ್ಶನ ನೀಡಬೇಕಿದೆ. ಸುಯಾಶ್ ಪ್ರಭುದೇಸಾಯಿ ಅಸಲಿ ಆಟವಾಡಬೇಕಿದೆ. ಇನ್ನುಳಿದಂತೆ ಫಾಫ್, ಗ್ಲೇನ್ ಮ್ಯಾಕ್ ವೆಲ್, ದಿನೇಶ್ ಕಾರ್ತಿಕ್, ಶಹಬ್ಬಾಸ್ ತಂಡದ ಬ್ಯಾಟಿಂಗ್ ಶಕ್ತಿಗಳಾಗಿದ್ದಾರೆ. ಬೌಲಿಂಗ್ ನಲ್ಲಿ ಜೋಷ್ ಹೆಜಲ್ ವುಡ್ ತಂಡಕ್ಕೆ ಜೋಷ್ ತಂದಿದ್ದಾರೆ. ಹರ್ಷಲ್, ಸಿರಾಜ್ ರನ್ ಗಳಿಗೆ ಕಡಿವಾಣ ಹಾಕಬೇಕಿದೆ. ಹಸರಂಗ ಮತ್ತಷ್ಟು ಮಿಂಚಬೇಕಿದೆ.
ಇಂದಿನ ಪಂದ್ಯದಲ್ಲಿ ಆರ್ ಸಿಬಿಯಲ್ಲಿ ಒಂದು ಬದಲಾವಣೆಯಾಗುವ ಸಾಧ್ಯತೆಗಳಿವೆ. ಅನೂಜ್ ರಾವತ್ ಪ್ಲೇಸ್ ನಲ್ಲಿ ವಿರಾಟ್ ಇನ್ನಿಂಗ್ಸ್ ಆರಂಭಿಸಬಹುದು. ಅನೂಜ್ ಒನ್ ಡೌನ್ ಅಥವಾ ಮಹಿಪಾಲ್ ಪ್ಲೇಯಿಂಗ್ 11 ನಲ್ಲಿ ಚಾನ್ಸ್ ಪಡೆಯಬಹುದು.
ಸಂಭಾವ್ಯ ಪ್ಲೇಯಿಂಗ್ ಇಲೆವೆನ್
ಫಾಫ್ ಡು ಪ್ಲೆಸಿಸ್ (c), ವಿರಾಟ್ ಕೊಹ್ಲಿ, ಅನುಜ್ ರಾವತ್ / ಮಹಿಪಾಲ್, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (WK), ಹರ್ಷಲ್ ಪಟೇಲ್, ವನಿಂದು ಹಸರಂಗ, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್ RR vs RCB preview | RCB Probable XIs