#RRR ಫಸ್ಟ್ ಗ್ಲಿಂಪ್ಸ್ ವಿಡಿಯೋ ರಿಲೀಸ್

1 min read
RRR saaksha tv

ಆರ್ ಆರ್ ಆರ್ ಫಸ್ಟ್ ಗ್ಲಿಂಪ್ಸ್ ವಿಡಿಯೋ ರಿಲೀಸ್ RRR saaksha tv

ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನದಲ್ಲಿ ಭಾರಿ ಬಜೆಟ್ ನಲ್ಲಿ ಮೂಡಿಬರುತ್ತಿರುವ ಸಿನಿಮಾ ಆರ್ ಆರ್ ಆರ್.

ರಾಮ ಚರಣ್, ಎನ್ ಟಿ ಆರ್ ಹೀರೋಗಳಾಗಿ ನಟಿಸುತ್ತಿರುವ ಈ ಸಿನಿಮಾಗಾಗಿ ಪ್ರಪಂಚದಾದ್ಯಂತ ಅಭಿಮಾನಿಗಳು ಕಾದಿದ್ದಾರೆ.

RRR   saaksha tv

ಇದೀಗ ಚಿತ್ರತಂಡ ಅಭಿಮಾನಿಗಳಿಗೆ ದೀಪಾವಳಿ ಕಿಕ್ ಕೊಟ್ಟಿದೆ. ಚಿತ್ರತಂಡ ಫಸ್ಟ್ ಗ್ಲಿಂಪ್ಸ್ ರಿಲೀಸ್ ಮಾಡಿ ಸೋಶಿಯಲ್ ಮೀಡಿಯಾಗೆ ಬೆಂಕಿ ಹಚ್ಚಿದೆ.

45 ಸೆಕೆಂಡ್ ಗಳ ಕಾಲ ಇರುವ ಈ ವಿಡಿಯೋ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಟ್ರೆಂಡಿಂಗ್ ನಲ್ಲಿದೆ. ಮುಖ್ಯವಾಗಿ ಎಂ.ಎಂ.ಕಿರವಾಣಿ ಬಿಜಿಎಂ ವಿಶೇಷ ಆಕರ್ಷಣೆಯಾಗಿದೆ.

ಚಿತ್ರದಲ್ಲಿ ರಾಮ್ ಚರಣ್ ಅಲ್ಲೂರಿ ಸೀತಾರಾಮರಾಜ್, ಜೂನಿಯರ್ ಎನ್‍ಟಿಆರ್ ಕೋಮರಂ ಭೀಮ್ ಪಾತ್ರವನ್ನು ನಿರ್ವಹಿಸಲಿದ್ದಾರೆ.

RRR   saaksha tv

ನಾಯಕಿಯರಾಗಿ ಆಲಿಯಾ ಭಟ್ ಮತ್ತು ಒಲಿವಿಯಾ ಮೋರಿಸ್ ನಟಿಸಿದ್ದಾರೆ. ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಡಿವಿವಿ ದಾನಯ್ಯ ಈ ಚಿತ್ರದ ನಿರ್ಮಾಪಕರು. ಮಹತ್ವಾಕಾಂಕ್ಷೆಯ ಚಿತ್ರವು ಜನವರಿ 7, 2022 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd