ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಚಿಕ್ಕಬಳ್ಳಾಪುರದಲ್ಲಿ #RRR ಅದ್ಧೂರಿ ಪ್ರಿ-ರಿಲೀಸ್ ಇವೆಂಟ್

Mahesh M Dhandu by Mahesh M Dhandu
March 20, 2022
in Cinema, Newsbeat, ಮನರಂಜನೆ
rrr pre release event chikkaballapur saaksha tv
Share on FacebookShare on TwitterShare on WhatsappShare on Telegram

ಗಡಿನಾಡು‌ ಚಿಕ್ಕಬಳ್ಳಾಪುರದಲ್ಲಿ RRR ಅದ್ಧೂರಿ ಪ್ರಿ-ರಿಲೀಸ್ ಇವೆಂಟ್…ಮೌಳಿಯ ರಂಗೀನ್‌ ಲೋಕದಲ್ಲಿ ಮಿಂದೆದ್ದ ಜನಸಾಗರ…ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್ ಗಳ ಸಮಾಗಮ

ಝಗಮಗಿಸುಗ ಸ್ಟೇಜ್.. ಕಣ್ಣಾಯಿಸದ ಕಡೆಯಲ್ಲಾ ಅಭಿಮಾನಿಗಣ…ಇಳಿ‌ಸಂಜೆಯಲ್ಲಿ‌ಸಂಗೀತ-ನೃತ್ಯದ ಯಾನ…ನೆಚ್ಚಿನ ಸ್ಟಾರ್ಸ್ ಕಣ್ತುಂಬಿಕೊಂಡು‌ ಪುಳಕರಾದ ಭಕ್ತಗಣ… ಇದೆಲ್ಲಾ ಗಡಿನಾಡು ಚಿಕ್ಕಬಳ್ಳಾಪುರದಲ್ಲಿ ನಡೆದ RRR ಅದ್ಧೂರಿ ಪ್ರಿ-ರಿಲೀಸ್ ಇವೆಂಟ್ ಝಲಕ್..

Related posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

March 26, 2026
ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

March 26, 2026

ಮಾರ್ಚ್ 25ಕ್ಕೆ ಪಂಚ ಭಾಷೆಯಲ್ಲಿ ಅದ್ಧೂರಿಯಾಗಿ ತೆರೆಕಾಣ್ತಿರುವ ಮಲ್ಟಿಸ್ಟಾರ್ ಸಿನಿಮಾ RRR ಪ್ರಿ-ರಿಲೀಸ್ ಇವೆಂಟ್ ಧಾಮ್ ಧೂಮ್ ಅಂತಾ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಳಿಸಂಜೆಯಲ್ಲಿ ಅದ್ಧೂರಿಯಾಗಿ ನಡೆದ ಪ್ರಿ-ರಿಲೀಸ್ ಇವೆಂಟ್ ಗೆ ಜನಸಾಗರವೇ ಹರಿದು ಬಂದಿತ್ತು. ಸುಮಾರು ನೂರು ಎಕರೆ ಜಾಗದಲ್ಲಿ ನಡೆದ ಕಾರ್ಯಕ್ರಮಕ್ಕೆ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಕೆ.ಸುಧಾಕರ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಇಡೀ ಆರ್ ಆರ್ ಆರ್ ಬಳಗ ಸಾಕ್ಷಿಯಾಯ್ತು.

ಯಂಗ್ ಟೈಗರ್ ಕನ್ನಡ ಪ್ರೀತಿಗೆ ಕನ್ನಡಿಗರ ಸಲಾಂ

ಕನ್ನಡ ಭಾಷೆ..ಕನ್ನಡಿಗರ ಮೇಲೆ ವಿಶೇಷ ಅಭಿಮಾನ ಹೊಂದಿರುವ ಯಂಗ್ ಟೈಗರ್ ಜೂನಿಯರ್ ಎನ್ ಟಿಆರ್ ಕನ್ನಡದಲ್ಲಿಯೇ ಮಾತು ಆರಂಭಿಸಿ ಎಲ್ಲರ ಗಮನಸೆಳೆದರು. ಅಪ್ಪು ಎಲ್ಲಿಯೂ ಹೋಗಿಲ್ಲ.. ಗಾಳಿ, ನೀರು ಎಲ್ಲೆಡೆ ಅಪ್ಪು ಇದ್ದಾರೆ ಅಂತಾ ನೆಚ್ಚಿನ ಗೆಳೆಯನನ್ನು ನೆನೆದ ತಾರಕ್, ಮಾರ್ಚ್ 25ಕ್ಕೆ ತ್ರಿಬಲ್ ಸಿನಿಮಾವನ್ನು ಫ್ಯಾಮಿಲಿ ಸಮೇತರಾಗಿ ನೋಡಿ‌ ಅಂತ ಮನವಿ‌ ಮಾಡಿಕೊಂಡರು.

rrr pre release event chikkaballapur  saaksha tv

ಅಪ್ಪು ನೆನೆದು ಭಾವುಕ

ತ್ರಿಬಲ್ ಸಿನಿಮಾ ಪ್ರಿ-ರಿಲೀಸ್ ಇವೆಂಟ್ ಸ್ಪೆಷಲ್ ಗೆಸ್ಟ್ ಆಗಿ ಆಗಮಿಸಿದ್ದ ನಟ ಶಿವರಾಜ್ ಕುಮಾರ್, ಒಂದು ಕಡೆ ಸಂತೋಷನೂ ಆಗ್ತಾ ಇದೆ, ಮತ್ತೊಂದು ಕಡೆ ದುಃಖ ಇದೆ. ಅಪ್ಪುನ ಕಳೆದುಕೊಂಡು ದುಃಖದಲ್ಲಿದ್ದೇವೆ. ನಮ್ಮ ದುಃಖದಲ್ಲಿ ಭಾರತೀಯ ಚಿತ್ರರಂಗ ಇದೆ, ಸರ್ಕಾರ ಇದೆ. ಬೊಮ್ಮಾಯಿ ಅವರು ಅಣ್ಣನ ಸ್ಥಾನದಲ್ಲಿ ನಿಂತಿದ್ದಾರೆ. ನಮಗಾದಷ್ಟೇ ನೋವು ಅವರಿಗೂ ಆಗಿದೆ. ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಬಂದು ನಾವು ನಿಮ್ಮ ತಮ್ಮ ಎಂದಾಗ ಖುಷಿ ಆಯ್ತು. ಅಪ್ಪುನ ಇವರಲ್ಲಿ, ಅಭಿಮಾನಿಗಳಲ್ಲಿ ಕಾಣ್ತೀದ್ದೇನೆ. ನಾನು ರಾಜಮೌಳಿ ದೊಡ್ಡ ಫ್ಯಾನ್​. ಜ್ಯೂ. ಎನ್​ಟಿಆರ್​ ಅವರ ಎಲ್ಲಾ ಸಿನಿಮಾ ಫಸ್ಟ್ ಡೇ ಫಸ್ಟ್ ಶೋ ನೋಡ್ತೀನಿ. ರಾಮ್​ ಚರಣ್​, ಪವನ್​ ಕಲ್ಯಾಣ್​, ಚಿರಂಜೀವಿ, ಅಜಿತ್​, ವಿಜಯ್​ ಪ್ರತಿಯೊಬ್ಬರ ಸಿನಿಮಾನೂ ನಾನು ಥಿಯೇಟರ್​ನಲ್ಲೇ ನೋಡೋದು. ನನಗೆ ಮನೆಯಲ್ಲೇ ಶೋ ಹಾಕಿಸಿಕೊಂಡು ಸಿನಿಮಾ ನೋಡೋದು ಇಷ್ಟ ಇಲ್ಲ. ನಾನು ಅಭಿಮಾನಿ ತರಹ ಥಿಯೇಟರ್​ಗೆ ಹೋಗೆ ಸಿನಿಮಾ ನೋಡೋದು’ ಎಂದಿದ್ದಾರೆ ಶಿವರಾಜ್​ಕುಮಾರ್. ಆರ್ ಆರ್ ಆರ್ ಸಿನಿಮಾ ಯಶಸ್ಸು ಆಗಲಿ‌ ಎಂದು ಹಾರೈಸಿದರು.

ಇಡೀ RRR ಬಳಗಕ್ಕೆ ಧನ್ಯವಾದ ಹೇಳಿದ ಮೌಳಿ

ಚಿತ್ರಬ್ರಹ್ಮ ರಾಜಮೌಳಿ ಅದ್ಧೂರಿ ಪ್ರಿ-ರಿಲೀಸ್ ಇವೆಂಟ್ ನಲ್ಲಿ ಇಡೀ ಚಿತ್ರತಂಡಕ್ಕೆ‌ ಧನ್ಯವಾದ ತಿಳಿಸಿದರು. ಶಿವಣ್ಣ, ಮುಖ್ಯಮಂತ್ರಿ, ಆರೋಗ್ಯ ಸಚಿವರ ಬಗ್ಗೆ ಕನ್ನಡದಲ್ಲಿಯೇ ಮಾತನಾಡಿ ಗಮನಸೆಳೆದ‌ ಮೌಳಿ, ಇಂತಹ ಅದ್ಧೂರಿ ಇವೆಂಟ್ ಆಯೋಜಿಸಿದ KVN ಸಂಸ್ಥೆಯ ಒಡೆಯ ವೆಂಕಟ್ ಅವರಿಗೆ ಧನ್ಯವಾದ ತಿಳಿಸಿದರು.‌ ನಟ ರಾಮ್ ಚರಣ್ ಸಿನಿಮಾ ನೋಡಲು ಕಾತುರನಾಗಿದ್ದೇನೆ. ಪ್ರತಿಯೊಬ್ಬರು ಥಿಯೇಟರ್ ಗೆ ಹೋಗಿ ಸಿನಿಮಾ‌ ನೋಡಿ ಪ್ರೋತ್ಸಾಹಿಸಿ‌ ಎಂದರು.

rrr pre release event chikkaballapur  saaksha tv

ಕಿತ್ತೂರು ರಾಣಿ ಚೆನ್ನಮ್ಮ‌ ಬಗ್ಗೆ ತೋರಿಸಿರುವುದು‌ ಹೆಮ್ಮೆ

ಸ್ವಾತಂತ್ರ್ಯ ಹೋರಾಟದ ಸತ್ಯಗಳು ಯುವಪೀಳಿಗೆಗೆ ತಿಳಿಸುವ ಕೆಲಸ ಆಗಬೇಕಿದೆ. ಸ್ವಾತಂತ್ರ್ಯ ಸೇನಾನಿ RRR ಸಿನಿಮಾ ನೋಡಿ‌ ಇಡೀ‌ ದೇಶ ಹೆಮ್ಮೆಪಡಲಿದೆ ಎಂದ ಮುಖ್ಯಮಂತ್ರಿ, ಕಿತ್ತೂರು ರಾಣಿ ಚೆನ್ನಮ್ಮ ಬಗ್ಗೆ RRR ಸಿನಿಮಾದಲ್ಲಿ ತೋರಿಸಿರುವುದು ಹೆಮ್ಮೆ ಎಂದರು.

ಭಾರತದ ಅತಿ‌ದೊಡ್ಡ ಇವೆಂಟ್ ನ್ನು ಚಿಕ್ಕಬಳ್ಳಾಪುರದಲ್ಲಿ ಏರ್ಪಡಿಸಿದ್ದ ಪ್ರತಿಷ್ಠಿತ ಕೆವಿಎನ್ ಪ್ರೊಡಕ್ಷನ್ ಹೌಸ್ RRR ಸಿನಿಮಾ ಕರುನಾಡಿನಾದ್ಯಂತ ಆರ್ ಆರ್ ಆರ್ ಚಿತ್ರವನ್ನು ವಿತರಣೆ‌ ಮಾಡಲಿದೆ. ಸುಮಾರು 450 ಕೋಟಿ ಬಜೆಟ್ ನಲ್ಲಿ ದಾನಯ್ಯ ಸಿನಿಮಾಗೆ ಬಂಡವಾಳ ಹೂಡಿದ್ದು, ರಾಜಮೌಳಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಜೂನಿಯರ್ ಎನ್ ಟಿಆರ್, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್ ಸೇರಿದಂತೆ ದೊಡ್ಡತಾರಾಬಳಗ ಸಿನಿಮಾದಲ್ಲಿ ನಟಿಸಿದ್ದು, ಇದೇ 25ಕ್ಕೆ ವರ್ಲ್ಡ್ ವೈಡ್ ಆರ್ ಆರ್ ಆರ್ ಸಿನಿಮಾ ರಿಲೀಸ್ ಅಗ್ತಿದೆ. rrr pre release event chikkaballapur

Tags: #Saaksha TVNTRRam CharanRRRSS Rajmouli
ShareTweetSendShare
Join us on:

Related Posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

by Shwetha
March 26, 2026
0

ಒಂದು ಕಡೆ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಮಾಧ್ಯಮಗಳು ಶಾಂತಿ ಮಾತುಕತೆಗಳ ಬಗ್ಗೆ ಹೇಳುತ್ತಿದ್ದರೆ, ಇನ್ನೊಂದು ಕಡೆ ಇಸ್ಲಾಮಿಕ್ ರೆವ್ಯೂಲೇಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ಸಂಪೂರ್ಣವಾಗಿ...

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

by Shwetha
March 26, 2026
0

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್‌ ಬೋಳಶೆಟ್ಟಿ ಅವರ ಪುತ್ರನ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ರಾಜು ಬೋಳಶೆಟ್ಟಿ (53) ಅವರ ಶವ...

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನವು ‌ನಿನ್ನೆ ಕೇವಲ ಆರ್ಥಿಕ ಚರ್ಚೆಗಳಿಗೆ ಸೀಮಿತವಾಗದೆ, ರಾಜಕೀಯದ ಬಿಸಿಬಿಸಿ ಚರ್ಚೆ, ವ್ಯಂಗ್ಯ ಮತ್ತು ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕಾರಿ...

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

by Shwetha
March 26, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆ ಕಾವು ಏರುತ್ತಿದ್ದಂತೆಯೇ ರಾಜಕೀಯ ಹೈಡ್ರಾಮಾ ತಾರಕಕ್ಕೇರಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಮತ್ತು ರಾಜ್ಯ ನಾಯಕರ ತೀವ್ರ...

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

by Shwetha
March 26, 2026
0

ನವದೆಹಲಿ: ದೇಶದ ಕೋಟ್ಯಂತರ ಮನೆಗಳ ಅಡುಗೆಮನೆಯ ಚಿತ್ರಣವನ್ನು ಸಂಪೂರ್ಣವಾಗಿ ಬದಲಾಯಿಸುವಂತಹ ಕಠಿಣ ನಿರ್ಧಾರವೊಂದನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಾರ್ಚ್ 24...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram