ಸಿನಿಮಾ ಮಾಂತ್ರಿಕ, ಸ್ಟಾರ್ ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದ, ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ ಆರ್ ಆರ್ ಆರ್. ಈ ಸಿನಿಮಾಗಾಗಿ ಸಿನಿರಸಿಕರು ತುದಿಗಾಲಿನಲ್ಲಿ ನಿಂತಿದ್ದಾರೆ. ಕೊರೊನಾ ಲಾಕ್ ಡೌನ್ ನಿಂದಾಗಿ ಸಿನಿಮಾದ ಚಿತ್ರೀಕರಣ ಸ್ಥಗಿತಗೊಂಡಿದೆ. ಇದರ ಮಧ್ಯೆ ಚಿತ್ರತಂಡ ಸಿನಿಮಾ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ವೊಂದನ್ನ ನೀಡಿದೆ.
ಆರ್ ಆರ್ ಆರ್ ಸಿನಿಮಾವನ್ನು ಈ ಮೊದಲು ಇದೇ ವರ್ಷ ಜುಲೈ ತಿಂಗಳಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಆದ್ರೆ ಚಿತ್ರತಂಡ ಸಿನಿಮಾ ರಿಲೀಸ್ ಅನ್ನು ಮುಂದಿನ ವರ್ಷಕ್ಕೆ ಹಾಕಿ ಅಭಿಮಾನಿಗಳಿಗೆ ಭಾರಿ ನಿರಾಸೆ ಮೂಡಿಸಿತ್ತು. ಆದರೀಗ ಚಿತ್ರದಿಂದ ಮತ್ತೊಂದು ಬ್ಯಾಡ್ ನ್ಯೂಸ್ ಹೊರಬಿದ್ದಿದ್ದು, ‘ಆರ್ ಆರ್ ಆರ್’ ಸಿನಿಮಾ ರಿಲೀಸ್ ಮತ್ತೆ ಮುಂದೆ ಹೋಗಿದೆ
ಜೂನಿಯರ್ ಎನ್.ಟಿ.ಆರ್, ರಾಮ್ ಚರಣ್ ತೇಜ ಅಭಿನಯದ ‘ಆರ್.ಆರ್.ಆರ್’ ಚಿತ್ರ ಮುಂದಿನ ವರ್ಷ ಜನವರಿ 8ಕ್ಕೆ ರಿಲೀಸ್ ಆಗಬೇಕಿತ್ತು. ಆದ್ರೆ ಕೊರೊನಾ ಲಾಕ್ ಡೌನ್ ನಿಂದ ಚಿತ್ರೀಕರಣ ನಿಂತುಹೋಗಿದೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಇನ್ನೂ ಬಾಕಿ ಇದೆ. ಒಂದುವೇಳೆ ಚಿತ್ರೀಕರಣ ಬೇಗ ಮುಗಿದರು ಪೋಸ್ಟ್ ಪ್ರಡೊಕ್ಷನ್ ಕೆಲಸಕ್ಕೆ ತುಂಬಾ ಸಮಯ ಬೇಕಾಗುತ್ತೆ. ಚಿತ್ರಕ್ಕೆ ವಿ ಎಫ್ ಎಕ್ಸ್ ಕೆಲಸ ತುಂಬಾ ಇದೆ. ಹಾಗಾಗಿ ಜನವರಿಗೆ ಅಂದುಕೊಂಡ ದಿನಾಂಕಕ್ಕೆ ಸಿನಿಮಾ ರಿಲೀಸ್ ಆಗುವುದು ಕಷ್ಟವೆಂದು ನಿರ್ಮಾಪಕ ದಾನಯ್ಯ ಸ್ಪಷ್ಟಪಡಿಸಿದ್ದಾರೆ.
ಇನ್ನು 400 ಕೋಟಿಗೂ ಅಧಿಕ ಬಜೆಟ್ ನಲ್ಲಿ ಆರ್ ಆರ್ ಆರ್ ಸಿನಿಮಾ ನಿರ್ಮಾಣವಾಗುತ್ತಿದ್ದು, 10 ಭಾಷೆಯಲ್ಲಿ ತೆರೆಗೆ ಬರುತ್ತಿದೆ. ದೊಡ್ಡ ತಾರಾಬಳಗವಿರುವ ಈ ಸಿನಿಮಾ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಈಗ ಮತ್ತೆ ಸಿನಿಮಾ ಮುಂದಕ್ಕೆ ಹೋಗಿರುವ ಸುದ್ದಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಆದರೆ ಇನ್ನೂ ಹೊಸ ರಿಲೀಸ್ ಡೇಟ್ ಅನೌನ್ಸ್ ಆಗಿಲ್ಲ.







