ಬಿಹಾರದಲ್ಲಿ ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡುವ ಕೋವಿಡ್ ವೀರರಿಗೆ 50 ಲಕ್ಷ ರೂ.ಗಳ ವಿಮಾ ರಕ್ಷಣೆ
ಪಾಟ್ನಾ, ಅಗಸ್ಟ್ 14: ಕೋವಿಡ್ -19 ಸೋಂಕಿತರಿಗೆ ಚಿಕಿತ್ಸೆ ನೀಡಲು ಖಾಸಗಿ ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರು ಮತ್ತು ಇತರ ಆರೋಗ್ಯ ಕಾರ್ಯಕರ್ತರಿಗೆ ಬಿಹಾರ ಸರ್ಕಾರ 50 ಲಕ್ಷ ರೂ.ಗಳ ವಿಮಾ ರಕ್ಷಣೆಯನ್ನು ಬುಧವಾರ ಪ್ರಕಟಿಸಿದೆ. ಈ ಯೋಜನೆಯನ್ನು ಕೇಂದ್ರ ಸರ್ಕಾರದ ಪ್ರಧಾನಿ ಗರಿಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಜಾರಿಗೆ ತರಲಾಗುವುದು.

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ
ವೈದ್ಯರು, ದಾದಿಯರು, ಅರೆವೈದ್ಯಕೀಯ ಸಿಬ್ಬಂದಿ ಮತ್ತು ಖಾಸಗಿ ಆಸ್ಪತ್ರೆಗಳ ಇತರ ಸಿಬ್ಬಂದಿಗಳು ಕೋವಿಡ್-19 ಸೋಂಕಿಗೆ ಬಲಿಯಾದರೆ ಈ ಯೋಜನೆಯ ಪ್ರಯೋಜನವು ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ಮಂಗಲ್ ಪಾಂಡೆ ಹೇಳಿದರು.
ಕೋವಿಡ್ -19 ರೋಗಿಗಳಿಗೆ ಮೆಡಿಕೇರ್ ಸೌಲಭ್ಯಗಳನ್ನು ಒದಗಿಸಲು ಜಿಲ್ಲಾಡಳಿತವು ಗುರುತಿಸಿರುವ ಖಾಸಗಿ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗೆ ಮಾತ್ರ ಈ ಯೋಜನೆಯ ಲಾಭ ಅನ್ವಯವಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಪ್ರಸ್ತುತ ಕೋವಿಡ್-19 ಅವಧಿಯಲ್ಲಿ, ಈ ವಿಮಾ ರಕ್ಷಣೆಯು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಪಾಂಡೆ ಹೇಳಿದರು.
ಅಧಿಕೃತ ಮೂಲಗಳ ಪ್ರಕಾರ, ಸೋಂಕಿತ ರೋಗಿಗಳಿಗೆ ಕೋವಿಡ್-19 ವಾರ್ಡ್‌ಗಳನ್ನು ನಡೆಸಲು ರಾಜ್ಯಾದ್ಯಂತ ಸುಮಾರು 120 ಖಾಸಗಿ ಆಸ್ಪತ್ರೆಗಳನ್ನು ಗುರುತಿಸಲಾಗಿದೆ.








