RSA vs IND 3rd test match : ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ
ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ವಿನ್ ಆಗಿದ್ದು, ಮೊದಲು ಬ್ಯಾಟಿಂಗ್ ಮಾಡಲಿದೆ.
ಈ ಮೊದಲೇ ಗೊತ್ತಿರುವಂತೆ ವಿರಾಟ್ ಕೊಹ್ಲಿ ಇಂದಿನ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ವಿರಾಟ್ ಆಗಮನದಿಂದಾಗಿ ಹನುಮವಿಹಾರ ಅವಕಾಶ ಕಳೆದುಕೊಂಡಿದ್ದಾರೆ. ಇನ್ನು ಗಾಯಗೊಂಡಿರುವ ಮೊಹಮ್ಮದ್ ಸಿರಾಜ್ ಬದಲಿಗೆ ಉಮೇಶ್ ಯಾದವ್ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳು ನಡೆದಿಲ್ಲ.
ತಂಡಗಳು
ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ(ಸಿ), ಅಜಿಂಕ್ಯ ರಹಾನೆ, ರಿಷಬ್ ಪಂತ್(ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್
ದಕ್ಷಿಣ ಆಫ್ರಿಕಾ : ಡೀನ್ ಎಲ್ಗರ್ (ಸಿ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ನೆ (ಕೀಪರ್), ಮಾರ್ಕೊ ಜಾನ್ಸೆನ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಲುಂಗಿ ಎನ್ಗಿಡಿ