ಸಾಮಾಜಿಕ ಜಾಲತಾಣಗಳಲ್ಲಿ ತ್ರಿವರ್ಣ ಧ್ವಜಕ್ಕೆ DP ಬದಲಾಯಿಸಿದ RSS
ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಶುಕ್ರವಾರ ತನ್ನ ಎಲ್ಲಾ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪ್ರೊಫೈಲ್ ಚಿತ್ರವನ್ನ ತ್ರಿವರ್ಣ ಧ್ವಜಕ್ಕೆ ಬದಲಾಯಿಸಿದೆ. ಇದೆ ಮೊದಲ ಬಾರಿಗೆ ಕೇಸರಿ ಧ್ವಜ ತೆಗೆದು ತ್ರಿವರ್ಣ ಧ್ವಜ ಹಾಕಿದ್ದಾರೆ.
ಆರ್‌ಎಸ್‌ಎಸ್ ಇದೇ ಮೊದಲ ಬಾರಿಗೆ ಪ್ರೋಪೈಲ್ ಪಿಕ್ ಚೇಂಜ್ ಮಾಡಿದ್ದು ಚರ್ಚೆಯಾಗುತ್ತಿದೆ. ಕೆಂದ್ರ ಸರ್ಕಾರ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸು ಪ್ರಚಾರ ಶುರು ಮಾಡಿದಾಗಿನಿಂದಲೂ ಪ್ರತಿಪಕ್ಷಗಳು ನಿರಂತರವಾಗಿ ಸಂಘದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದವು. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ದತ್ತಾತ್ರೇಯ ಹೊಸಬಾಳೆ ಕೂಡ ತಮ್ಮ ಡಿಪಿಯಲ್ಲಿ ರಾಷ್ಟ್ರಧ್ವಜದ ಪಿಕ್ ಹಾಕಿದ್ದಾರೆ.
ಆರ್ ಎಸ್ ಎಸ್ ಪ್ರಚಾರ ವಿಭಾಗದ ಸಹ ಪ್ರಭಾರಿ ನರೇಂದ್ರ ಠಾಕೂರ್ ಮಾತನಾಡಿ, ‘ಸಂಘದ ಎಲ್ಲ ಕಚೇರಿಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸಿದ ಖುಷಿಯಲ್ಲಿ ಸರ್ಕಾರ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ.
ಮನ್ ಕಿ ಬಾತ್ ನ 91ನೇ ಸಂಚಿಕೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ಮನೆಗಳಲ್ಲಿ ಮತ್ತು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಪ್ರೊಫೈಲ್‌ನಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಮನವಿ ಮಾಡಿದ್ದರು. ಇದಾದ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಜನರು ತ್ರಿವರ್ಣ ಧ್ವಜವನ್ನು ತಮ್ಮ ಪ್ರೊಫೈಲ್ ಫೋಟೋದಲ್ಲಿ ಹಾಕಿಕೊಂಡಿದ್ದಾರೆ.