ಕೊರೊನಾ ಸಂಬಂಧ ಅಗತ್ಯ ವಸ್ತುಗಳನ್ನು ಮನೆ ಮೆನೆಗೆ ತಲುಪಿಸುವ ಉದ್ದೇಶದಿಂದ ಈಗಾಗಲೇ ಪ್ರಾಯೋಗಿಕವಾಗಿ ಕತ್ರಿಗುಪ್ಪೆ ವಾರ್ಡ್ ನಲ್ಲಿ ‘ಹೋಮ್ ಡೆಲಿವರಿ’ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಇದೀಗ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಸವನಗುಡಿ, ಜಯನಗರ, ಪದ್ಮನಾಭನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಿಗೂ ಈ ಸೇವೆಯನ್ನು ವಿಸ್ತರಿಸಲಾಗುತ್ತಿದೆ.
ಅಗತ್ಯ ದಿನಬಳಕೆಯ ಸಾಮಗ್ರಿಗಳು, ದಿನಸಿ, ತರಕಾರಿ, ಔಷಧ ಸಾಮಗ್ರಿಗಳನ್ನು ನೇರವಾಗಿ ಮನೆ ಬಾಗಿಲಿಗೆ ತಲುಪಿಸುವ ಹೋಮ್ ಡೆಲಿವರಿ ಸೇವೆ ಇದಾಗಿದೆ. ಸಹಾಯವಾಣಿ ಸಂಖ್ಯೆ 080 61914960ಗೆ ಕರೆ ಮಾಡಿ ಅಗತ್ಯ ವಸ್ತುಗಳನ್ನು ಪಡೆಯಬಹುದಾಗಿದೆ.








