ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ಪ್ರಕರಣಗಳನ್ನು ವೇಗವಾಗಿ ಪತ್ತೆ ಹಚ್ಚುವ ನಿಟ್ಟಿನಲ್ಲಿ ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಗೆ ಇಂದು ಪಾಲಿಕೆ ಕೇಂದ್ರ ಆವರಣದಲ್ಲಿ ಚಾಲನೆ ನೀಡಲಾಯ್ತು. ಮೇಯರ್ ಗೌತಮ್ ಕುಮಾರರ್ ಜೈನದ ಹಾಗೂ ಉಪಮೇಯರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಈ ವೇಳೆ ಮಹಾಪೌರರಿಗೆ ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಂಜುನಾಥ್ ರಾಜು. ಜಿ, ಆಯುಕ್ತರಾದ ಬಿ ಹೆಚ್ ಅನಿಲ್ ಅವರು ಸಾಥ್ ನೀಡಿದ್ರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ 198 ವಾರ್ಡ್ ಗಳಲ್ಲಿ ಪ್ರಮುಖವಾಗಿ ILI/SARI ಲಕ್ಷಣಗಳಿರುವ, ಕಂಟೈನ್ಮೆಂಟ್ ಪ್ರದೇಶ, ಕೊಳಗೇರಿ ಪ್ರದೇಶ ಹಾಗೂ ಪೌರಕಾರ್ಮಿಕರ ಕಾಲೋನಿಗಳಲ್ಲಿ ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ನಡೆಸಲು ಇಂದು ಚಾಲನೆ ನೀಡಲಾಗಿದ್ದು, ಅದಕ್ಕಾಗಿ ವಲಯವಾರು ಓಲಾ ವಾಹನಗಳನ್ನು ನಿಯೋಜನೆ ಮಾಡಲಾಗಿದೆ. ವಾಹನದಲ್ಲಿ ಮೂರು ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ.
ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...








