ಶಾಲೆಗಳ ಪುನರಾರಂಭಕ್ಕೆ ರುಪ್ಸಾ ಒತ್ತಾಯ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮವಾಗಿ ಆರು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಿದೆ.
ಆದ್ರೆ ಇದಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದ್ದು, ಶಾಲೆಗಳ ಪುನರಾರಂಭಕ್ಕೆ ಒತ್ತಾಯಿಸಿದೆ.
ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಹತ್ತಿರವಾಗುತ್ತಿದೆ.
ಹೀಗಾಗಿ 5ನೇ ತರಗತಿ ಮೇಲ್ಪಟ್ಟ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಬೇಕು ಎಂದು ಸರ್ಕಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ಮನವಿ ಮಾಡಿಕೊಂಡಿದೆ.
ಕೊರೊನಾ ಸೋಂಕಿನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಭೌತಿಕ ತರಗತಿಗಳು ಸರಿಯಾಗಿ ನಡೆದಿಲ್ಲ.
ಈಗ ಮತ್ತೆ 1 ರಿಂದ 9ನೆ ತರಗತಿವರೆಗೆ ಶಾಲೆಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಮಕ್ಕಳ ಭವಿಷ್ಯ ಹಾಳಾಗಲಿದೆ.
ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಐದನೇ ತರಗತಿ ಮೇಲ್ಟಟ್ಟು ತರಗತಿಗಳ ಆರಂಭಕ್ಕೆ ಅನುಮತಿ ಕೋರಿದೆ.
ಅಲ್ಲದೆ ಕೊರೊನಾ ಬಂದಿರುವ ಪ್ರದೇಶಗಳ ಶಾಲೆಗಳನ್ನು ಮಾತ್ರ ಬಂದ್ ಮಾಡುವುದು ಸೂಕ್ತ ಎಂದು ರುಪ್ಸಾ ಅಭಿಪ್ರಾಯಪಟ್ಟಿದೆ.