ಬಿಟ್ ಕಾಯಿನ್ ಆರೋಪ ಕಾಂಗ್ರೆಸ್ನ ಖಾಲಿ ಡಬ್ಬಿ – ಕೆ. ಎಸ್. ಈಶ್ವರಪ್ಪ
ಬಿಟ್ ಕಾಯಿನ್ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಖಾಲಿ ಡಬ್ಬ ಅಲ್ಲಾಡಿಸುತ್ತಿದ್ದಾರೆ. ಸದ್ದೇನೋ ಜೋರಾಗಿ ಬರುತ್ತಿದೆ. ಆದರೆ, ಒಳಗೆ ಏನೂ ಇಲ್ಲ ಎಂದು ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು
ಶಿವಮೊಗ್ಗ ನಗರದಲ್ಲಿ ಶನಿವಾರ ಅವರು ಸುದ್ದಿಗಾರರ ಜತೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರು ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿಯ ಯಾವ ಮುಖ್ಯಮಂತ್ರಿ, ಸಚಿವರು, ಶಾಸಕರೂ ನಾಯಕ, ಪದಾಧಿಕಾರಿಯೂ ಇಲ್ಲ. ಕಾಂಗ್ರೆಸ್ಗೆ ತಾಕತ್ತಿದ್ದರೆ ಒಂದು ದಾಖಲೆ ನೀಡಲಿ ಎಂದು ಸವಾಲು ಎಸೆದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಪ್ರಿಯಾಂಕ್ ಖರ್ಗೆ ಬರೀ ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾರೆ. ಯಾವುದಾರೂ ಒಂದು ದಾಖಲೆ ಇದ್ದರೆ ತೋರಿಸಲಿ. ಅದನ್ನು ಬಿಟ್ಟು ಖಾಲಿ ಡಬ್ಬದಂತೆ ಮಾತನಾಡುವುದನ್ನು ಬಿಡಬೇಕು ಎಂದು ಟೀಕಿಸಿದರು
ವಿಧಾನ ಪರಿಷತ್ ಚುನಾವಣೆ
ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ನೇತೃತ್ವದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ರಾಜ್ಯಾಧ್ಯಕ್ಷರು ಸಿಎಂ ಜೊತೆ ಚರ್ಚಿಸಿ ಅಂತಿಮಗೊಳಿಸಿ ಕೇಂದ್ರಕ್ಕೆ ಕಳುಹಿಸುತ್ತಾರೆ. ಇಂದು ಅಥವಾ ನಾಳೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದರು.
ಪುತ್ರ ಕೆ.ಇ.ಕಾಂತೇಶ್ಗೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೇಳಿಲ್ಲ. ನಾನು ಸಚಿವ ಸ್ಥಾನದಲ್ಲಿ ಇರುವವರೆಗೂ ಶಾಸಕ, ವಿಧಾನ ಪರಿಷತ್ ಚುನಾವಣೆಗೆ ನಿಲ್ಲಿಸುವುದಿಲ್ಲ. ಈ ವಿಷಯ ಹೈಕಮಾಂಡ್ ಗಮನಕ್ಕೂ ತಂದಿರುವೆ ಎಂದು ಪ್ರತಿಕ್ರಿಯಿಸಿದರು.








