5 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ – Saaksha Tv
ರಷ್ಯಾ: ಉಕ್ರೇನ್ನಲ್ಲಿನ ನಾಗರಿಕರ ಸುರಕ್ಷಿತ ಸ್ಥಳಾಂತರಕ್ಕಾಗಿ ರಷ್ಯಾ ಕದನ ವಿರಾಮ ಘೋಷಿಸಿದೆ ಎಂದು ರಷ್ಯಾದ ವಿದೇಶಾಂಗ ವ್ಯವಹಾರಗಳು ಅಧಿಕೃತ ಹೇಳಿಕೆ ನೀಡಿವೆ.
ಬೆಳಗ್ಗೆ 10 ಗಂಟೆಯಿಂದ ಕೈವ್, ಚೆರ್ನಿಹಿವ್, ಸುಮಿ, ಖಾರ್ಕಿವ್ ಮತ್ತು ಮರಿಯುಪೋಲ್ ನಗರಗಳಲ್ಲಿ ಕದನ ವಿರಾಮ ಘೋಷಿಸಿದೆ. ಕದನ ವಿರಾಮ ಘೋಷಣೆಯಾದ ಹಿನ್ನಲೆಯಲ್ಲಿ ಮಾನವೀಯ ಕಾರಿಡಾರ್‌ಗಳನ್ನು ರಚಿಸಲಾಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲಾಗುತ್ತದೆ ಎಂದು ರಷ್ಯಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈಗಾಗಲೇ ಕೆಲವು ಕಡೆಗಳಲ್ಲಿ ಮಾನವೀಯ ಕಾರಿಡಾರ್‌ಗಳನ್ನು ರಚನೆ ಮಾಡಲಾಗಿದ್ದು, ಇನ್ನೂ ಹಲವು ಕಾರಿಡಾರ್‌ಗಳನ್ನು ರಚಿಸಬೇಕೆಂಬ ಪ್ರಸ್ತಾಪ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಮೊದಲು ಹಲವು ಪ್ರದೇಶಗಳಲ್ಲಿ ಮಾನವೀಯ ಕಾರಿಡಾರ್‌ಗಳನ್ನು ರಚಿಸಲಾಗಿದ್ದು, ಕೆಲವೆಡೆ ಆ ಕಾರಿಡಾರ್ಗಳು ಯಶಸ್ವಿಯಾಗಿ ಕಾರ್ಯ ನಿರ್ವಹಿಸಲು ವಿಫಲವಾಗಿದ್ದವು. ಈಗ ಮತ್ತೊಮ್ಮೆ ಐದು ನಗರಗಳಲ್ಲಿ ಕದನ ವಿರಾಮ ಘೋಷಿಸಿ ಮಾನವೀಯ ಕಾರಿಡಾರ್‌ಗಳನ್ನು ರಚಿಸಲಾಗಿದೆ.
ಈ ಮಧ್ಯೆ ಉಕ್ರೇನಿಯನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರು ಮಾರ್ಚ್ 10ರಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಭೇಟಿ ಮಾಡುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ.









