ಉಕ್ರೇನ್ ನ ಗ್ಯಾಸ್ ಪೈಪ್‍ಲೈನ್ ನ್ನು ಸ್ಪೋಟಿಸಿದ ರಷ್ಯಾ – Saaksha Tv
ಉಕ್ರೇನ್: ಉಕ್ರೇನ್ ಮೇಲೆ ರಷ್ಯಾ ಸೈನಿಕರ ಆಕ್ರಮಣ ತೀರ್ವ ಸ್ವರೂಪ ಪಡೆದುಕೊಂಡಿದ್ದು, ಇಂದು ಉಕ್ರೇನ್ ನ ಕರ್ಕಿವ್‍ನಲ್ಲಿರುವ ಗ್ಯಾಸ್ ಪೈಪ್‍ಲೈನ್ ಅನ್ನು ರಷ್ಯಾ ಸೇನೆ ಸ್ಫೋಟಿಸಿದೆ ಉಕ್ರೇನ್ ಅಧ್ಯಕ್ಷರ ಕಚೇರಿ ಅಧಿಕೃತವಾಗಿ ತಿಳಿಸಿದೆ.
ಸ್ಫೋಟದ ಪರಿಣಾಮ ಆಯಿಲ್ ಟ್ಯಾಂಕ್ ಸ್ಫೋಟಗೊಂಡು ಆಗಸದಲ್ಲಿ ದೊಡ್ಡ ಅಣಬೆಯಾಕಾರದ ಮೋಡ ಆವರಿಸಿಕೊಂಡಿದೆ. ಇದು ಪರಿಸರಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಲಿದೆ ಎಂದು ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ.
ನಗರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಮನೆ ಕಿಟಕಿಗಳನ್ನು ಬಟ್ಟೆಯಲ್ಲಿ ಮುಚ್ಚಬೇಕು. ಜೊತೆಗೆ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ದ್ರವ ಪದಾರ್ಥಗಳನ್ನು ಹೆಚ್ಚು ಸೇವಿಸುವಂತೆ ಉಕ್ರೇನ್ ಸರ್ಕಾರ ಸೂಚಿಸಿದೆ.
ಕರ್ಕಿವ್ ನಗರ ರಷ್ಯಾ ಗಡಿಯಿಂದ 40 ಕಿಲೋ ಮೀಟರ್ ದೂರದಲ್ಲಿದ್ದು, ಇಲ್ಲಿ ಸುಮಾರು 15 ಲಕ್ಷ ಜನರು ವಾಸಿಸುತ್ತಿದ್ದಾರೆ.