ರಷ್ಯಾ-ಉಕ್ರೇನ್ ಉದ್ವಿಗ್ನತೆ | ರಾಜತಾಂತ್ರಿಕ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳು ಸಲಹೆ ನೀಡಿದ ಭಾರತ Saaksha Tv
ಯುಎಸ್: ‘ರಷ್ಯಾ ಮತ್ತು ಉಕ್ರೇನ್ ಮಧ್ಯೆ ನಿರ್ಮಾಣವಾಗಿರುವ ಉದ್ವಿಗ್ನ ವಾತಾವರಣ ಕುರಿತು ಭಾರತ ಕಳವಳ ವ್ಯಕ್ತಪಡಿಸಿದೆ.
ಉಕ್ರೇನ್ -ರಷ್ಯಾ ಬಿಕ್ಕಟ್ಟಿನ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆ ನಡೆದಿದ್ದು, ಸಭೆಯಲ್ಲಿ ಭಾರತ ಉಭಯ ದೇಶಗಳು ಗಡಿಯಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಬೇಕು”. ಅಲ್ಲದೆ ಸಂಯಮ ಕಾಪಾಡಿಕೊಳ್ಳುವುದರ ಜೊತೆಗೆ ರಾಜತಾಂತ್ರಿಕ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಎಂದು ವಿಶ್ವಸಂಸ್ಥೆಯಲ್ಲಿರುವ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ಸಲಹೆ ನೀಡಿದೆ.
📺Watch: Permanent Representative @AmbTSTirumurti speak at the #UNSC Meeting on #Ukraine ⤵️#IndiainUNSC @MEAIndia @UNDPPA pic.twitter.com/W1ROBvZ6Xt
— India at UN, NY (@IndiaUNNewYork) February 22, 2022
ಇದಕ್ಕಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರೂ ಪ್ರಯತ್ನಿಸಬೇಕು. ಶಾಂತಿ, ಭದ್ರತೆ ಕಾಪಾಡಿಕೊಳ್ಳುವುದು ಅತಿಮುಖ್ಯ’ ‘ನಾಗರಿಕರ ಸುರಕ್ಷತೆ ಮತ್ತು ಭದ್ರತೆ ಅತ್ಯಗತ್ಯ. ಉಕ್ರೇನ್ನಲ್ಲಿ 20 ಸಾವಿರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರು ವಾಸಿಸುತ್ತಿದ್ದಾರೆ. ಅವರ ರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ’ ಎಂದು ಅವರು ಪ್ರತಿಪಾದಿಸಿದರು.
ಮಿನ್ಸ್ಕ್ ಒಪ್ಪಂದಗಳ ಪ್ರಾಮುಖ್ಯತೆಯನ್ನು ಹೇಳುತ್ತಾ, ಪ್ರಮುಖ ಭದ್ರತೆ ಮತ್ತು ರಾಜಕೀಯ ಅಂಶಗಳನ್ನು ಒಳಗೊಂಡಂತೆ ಮಿನ್ಸ್ಕ್ ಒಪ್ಪಂದಗಳ ನಿಬಂಧನೆಗಳ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಸಾಮಾನ್ಯ ನೆಲೆಯನ್ನು ಹುಡುಕಲು ಎಲ್ಲಾ ಕಡೆ ಹೆಚ್ಚಿನ ಪ್ರಯತ್ನಗಳ ಅಗತ್ಯವಿದೆ ಎಂದು ತಿರುಮೂರ್ತಿ ಹೇಳಿದರು.







