ಉಕ್ರೇನಲ್ಲಿ ಸೇನಾ ದಾಳಿಗೆ ಪ್ರಾಣ ಕಳೆದುಕೊಂಡ ಕರ್ನಾಟಕದ ವಿದ್ಯಾರ್ಥಿ…
ರಷ್ಯಾ ಮತ್ತು ಉಕ್ರೇನ್ ನಡುವೆ ನಡೆದ ಯುದ್ಧದಲ್ಲಿ ಕರ್ನಾಟಕದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಇದನ್ನು ವಿದೇಶಾಂಗ ಸಚಿವಾಲಯ ದೃಢಪಡಿಸಿದೆ. ಖಾರ್ಕಿವ್ನಲ್ಲಿ ರಷ್ಯಾ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. ಮೃತ ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿರುವುದಾಗಿ ಕೇಂದ್ರ ತಿಳಿಸಿದೆ.
ಖಾರ್ಕಿವ್ನಲ್ಲಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಯ ಹೆಸರು ನವೀನ್ ಶೇಖರಪ್ಪ. ಸುಮಾರು 21 ವರ್ಷದ ನವೀನ್ ಕರ್ನಾಟಕದ ಹಾವೇರಿ ಜಿಲ್ಲೆ ಚಳಗೇರಿ ನಿವಾಸಿಯಾಗಿದ್ದು ಪ್ರಸ್ತುತ ಉಕ್ರೇನ್ನಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದರು.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಭಾರತದ ವಿದೇಶಾಂಗ ಕಾರ್ಯದರ್ಶಿ ರಷ್ಯಾ ಮತ್ತು ಉಕ್ರೇನ್ನ ರಾಯಭಾರಿಗಳನ್ನು ಕರೆಸಿಕೊಂಡಿದ್ದಾರೆ. ಖಾರ್ಕಿವ್ ಮತ್ತು ಇತರ ನಗರಗಳಲ್ಲಿ ವಾಸಿಸುವ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ತಕ್ಷಣವೇ ಅನುಮತಿಸುವಂತೆ ತಮ್ಮ ಬೇಡಿಕೆಯನ್ನು ಎತ್ತಿದ್ದಾರೆ. ರಷ್ಯಾ ಮತ್ತು ಉಕ್ರೇನ್ನಲ್ಲಿರುವ ಭಾರತದ ರಾಯಭಾರಿಗಳು ಸಹ ಸರ್ಕಾರದೊಂದಿಗೆ ನಿರಂತರವಾಗಿ ಮಾತನಾಡುತ್ತಿದ್ದಾರೆ ಮತ್ತು ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ.