ಸೈಬೀರಿಯಾದಲ್ಲಿ (Siberia) ರಷ್ಯಾದ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ 6 ಜನ ಸಾವನ್ನಪ್ಪಿ, 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಎಂಐ-8 ಹೆಲಿಕಾಪ್ಟರ್ ಲ್ಯಾಂಡಿಂಗ್ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡು ದಕ್ಷಿಣ ಸೈಬೀರಿಯಾದ ಅಲ್ಟಾಯ್ ರಿಪಬ್ಲಿಕ್ ನಲ್ಲಿ ಪತನವಾಗಿದೆ. ಹೆಲಿಕಾಪ್ಟರ್ ಜೋರಾಗಿ ಸಿಡಿದು ಬೆಂಕಿ ಹೊತ್ತಿಕೊಂಡ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ.
ಹೆಲಿಕಾಪ್ಟರ್ ಅಪಘಾತಕ್ಕೀಡಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನವಾಗಿದೆ. ಘಟನೆಯಲ್ಲಿ ಮೂವರು ಸಿಬ್ಬಂದಿ ಸೇರಿದಂತೆ 15 ಜನ ಪ್ರಯಾಣಿಕರು ಇದ್ದರು ಎನ್ನಲಾಗಿದೆ.