ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಗೆ ಹೃದಯ ಸ್ತಂಭನವಾಗಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ.
ರಷ್ಯಾ, ಉಕ್ರೇನ್ ಮೇಲೆ ದಾಳಿ ಆರಂಭವಾದಾಗಿನಿಂದಲೂ ಪುಟಿನ್ ಆರೋಗ್ಯದ ಬಗ್ಗೆ ಹಲವಾರು ವಿಚಾರಗಳು ಸದ್ದು ಮಾಡುತ್ತಲೇ ಇದ್ದವು. ಈಗ ಭಾನುವಾರ ಸಂಜೆ ಹೃದಯ ಸ್ತಂಭನಕ್ಕೆ (Cardiac Arrest) ಒಳಗಾಗಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.
ಸದ್ಯದ ಮಾಹಿತಿಯಂತೆ ವ್ಲಾಡಿಮಿರ್ ಪುಟಿನ್ ಭಾನುವಾರ ರಾತ್ರಿ ತನ್ನ ಮಲಗುವ ಕೋಣೆಯಲ್ಲಿಯೇ ನೆಲದ ಮೇಲೆ ಆಹಾರ ಮತ್ತು ಪಾನೀಯಗಳೊಂದಿಗೆ ಮಗುಚಿಕೊಂಡಿದ್ದ ಟೇಬಲ್ ಪಕ್ಕದಲ್ಲಿ ಬಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದರು ಎಂದು ಅವರ ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ.
ಟೇಬಲ್ ಮತ್ತು ಅದರ ಮೇಲಿದ್ದ ಆಹಾರ, ಡ್ರಿಂಕ್ಸ್ ಬಾಟಲಿಗಳು ಟೇಬಲ್ನಿಂದ ಕೆಳಗೆ ಬಿದ್ದಿದ್ದವು. ಅದರಿಂದ ದೊಡ್ಡ ಶಬ್ಧ ಉಂಟಾಗಿತ್ತು. ಭದ್ರತಾ ಸಿಬ್ಬಂದಿ ತಕ್ಷಣ ಅಲ್ಲಿಗೆ ಧಾವಿಸಿದಾಗ ಪುಟಿನ್ ನೆಲದ ಮೇಲೆ ಬಿದ್ದು, ನೋವಿನಿಂದ ನರಳುತ್ತಿರುವುದು ಕಂಡು ಬಂದಿದಿ ಎನ್ನಲಾಗಿದೆ. ವೈದ್ಯರು ತುರ್ತು ಚಿಕಿತ್ಸೆ ನೀಡಿದರು. ನಂತರ ಪುಟಿನ್ರನ್ನ ಅವರ ನಿವಾಸದಲ್ಲೇ ವಿಶೇಷವಾಗಿ ಸುಸಜ್ಜಿತ ಕೋಣೆಗೆ ಸ್ಥಳಾಂತರಿಸಲಾಯಿತು. ಪ್ರಥಮ ಚಿಕಿತ್ಸೆ ನೀಡಿದ್ದರಿಂದಾಗಿ ಮತ್ತೆ ಅವರ ಹೃದಯ ಆರೋಗ್ಯ ಸ್ಥಿತಿಗೆ ಬಂದಿದೆ ಎಂದು ಟೆಲಿಗ್ರಾಮ್ ಚಾನೆಲ್ ವರದಿ ಮಾಡಿದೆ.