ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಭವಸಾಗರ ದಾಟಿದ ಎಸ್‌. ಎಲ್‌ ಭೈರಪ್ಪ ಅವರ ಜೀವನಗಾಥೆ, ಕಾದಂಬರಿಗಳು

ಭವಸಾಗರ ದಾಟಿದ ಎಸ್‌. ಎಲ್‌ ಭೈರಪ್ಪ ಅವರ ಜೀವನಗಾಥೆ, ಕಾದಂಬರಿಗಳು

Saaksha Editor by Saaksha Editor
September 24, 2025
in State, Newsbeat, ರಾಜ್ಯ
S L Bhyrappa death: Writer S.L. Bhyrappa life story and novels

ಎಸ್‌. ಎಲ್‌ ಭೈರಪ್ಪ

Share on FacebookShare on TwitterShare on WhatsappShare on Telegram

ಬೆಂಗಳೂರು, ಸೆ.24: ನಾಡಿನ ಹಿರಿಯ ಸಾಹಿತಿ, ಕಾದಂಬರಿಕಾರ ಎಸ್‌. ಎಲ್‌ ಭೈರಪ್ಪ (S. L. Bhyrappa) ಅವರು ನಿಧನರಾಗಿದ್ದಾರೆ. 94 ವರ್ಷದ ಎಸ್‌ ಎಲ್‌ ಭೈರಪ್ಪ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಪತ್ನಿ ಸರಸ್ವತಿ, ಪುತ್ರರಾದ ರವಿಶಂಕ‌ರ್ ಹಾಗೂ ಉದಯಶಂಕರ್ ಇದ್ದಾರೆ.

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026

ಎಸ್‌ ಎಲ್‌ ಬೈರಪ್ಪ ಅವರ ಪೂರ್ಣ ಹೆಸರು ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಸಂತೇಶಿವರ ಗ್ರಾಮದಲ್ಲಿ 1934 ಆಗಸ್ಟ್ 20ರಂದು ಲಿಂಗಣ್ಣಯ್ಯ-ಗೌರಮ್ಮ ದಂಪತಿಯ ಪುತ್ರರಾಗಿ ಜನಿಸಿದರು. ಎಸ್‌ ಎಲ್‌ ಭೈರಪ್ಪ ಅವರು ಐದು ವರ್ಷದವರಾಗಿದ್ದಾಗ ಅವರ ತಾಯಿ ಪ್ಲೇಗ್‌ಗೆ ಬಲಿಯಾದರು. ಇದಾದ ನಂತರ ಬೈರಪ್ಪ ಅವರಿಗೆ ಜೀವನದ ದಿಕ್ಕೇ ಕಾಣದಂತೆ ಆಯ್ತು. ಇದಾದ ನಂತರ ತಮ್ಮ ಜೀವನವನ್ನು ತಾವೇ ಕಟ್ಟಿಕೊಳ್ಳಲು ಮುಂದಾದರು. ಗಾಂಧೀಜಿಯವರಿಂದ ಪ್ರಭಾವಿತರಾದ ಇವರು ಸ್ವಾತಂತ್ರ್ಯ ಚಳುವಳಿಯಲ್ಲೂ ಸಹ ಭಾಗಿಯಾಗಿದ್ದರು.

ಬಾಗೂರು, ನುಗ್ಗೇಹಳ್ಳಿ ಶಾಲೆಗಳಲ್ಲಿ ಪ್ರಾಥಮಿಕ, ಮೈಸೂರಿನ ಶಾರದಾವಿಲಾಸದಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆದರು. ಮಹಾರಾಜ ಕಾಲೇಜಿನಲ್ಲಿ ಬಿ.ಎ ಹಾಗೂ ಮೈಸೂರು ವಿಶ್ವವಿದ್ಯಾಲಯದಲ್ಲಿ 2 ಚಿನ್ನದ ಪದಕಗಳೊಂದಿಗೆ ಎಂ.ಎ ತತ್ವಶಾಸ್ತ್ರದಲ್ಲಿ ಪದವಿ ಪಡೆದಿದ್ದರು.

ಬರೋಡದ ಸಯ್ಯಾಜಿರಾವ್ ವಿಶ್ವವಿದ್ಯಾಲಯದಲ್ಲಿ ‘ಸತ್ಯ ಮತ್ತು ಸೌಂದರ್ಯ’ ಪ್ರಬಂಧಕ್ಕೆ ಪಿ.ಎಚ್‌ಡಿ ಪದವಿ ಪಡೆದ ನಂತರ ಅವರು, ಹುಬ್ಬಳ್ಳಿಯ ಕಾಡಸಿದ್ದೇಶ್ವರ ಕಾಲೇಜು, ಗುಜರಾತ್‌ನ ಸರ್ದಾರ್ ವಲ್ಲಭಬಾಯಿ ಪಟೇಲ್ ವಿಶ್ವವಿದ್ಯಾಲಯದಲ್ಲಿ ತತ್ವಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು.

ಇದಾದ ನಂತರ ಅವರು ಸಾಹಿತ್ಯ ಕ್ಷೇತ್ರಕ್ಕೆ ಕಾಲಿರಿಸಿದರು. 1961 ರಲ್ಲಿ ಧರ್ಮಶ್ರೀ ಎಂಬ ಕಾದಂಬರಿ ಪ್ರಕಟಿಸಿದರು. ಇದಾದ ನಂತರ ಒಟ್ಟು ನಾಲ್ಕು ದಶಕಗಳಲ್ಲಿ 21 ಕಾದಂಬರಿಗಳನ್ನು ಬರೆದಿದ್ದಾರೆ. ಕೆಲವು ಪತ್ರಿಕೆಗಳಲ್ಲಿ ಪ್ರಕಟ ಆಗುತ್ತಿದ್ದ ಇವರ ಲೇಖನಗಳು ನಾಡಿನ ಜನರ ಅಂತಃಕರಣವನ್ನು ಮುಟ್ಟಿವೆ. ಇವರ ಈ ಎಲ್ಲಾ ಸಾಧನೆಗೆ ಭಾರತ ಸರ್ಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ಈ ನಡುವೆ ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ ಕಾದಂಬರಿಗಳು ಚಲನಚಿತ್ರವಾಗಿ ಪ್ರಶಸ್ತಿ ಪಡೆದಿವೆ. ಇದರೊಂದಿಗೆ ವಂಶವೃಕ್ಷಕ್ಕೆ 1966 ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1975 ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ಇದನ್ನೂ ಓದಿ: ಎಸ್‌. ಎಲ್‌ ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ಇವರು ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಅಪಾರ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ.

ಕಾದಂಬರಿಗಳು

  • ಭೀಮಕಾಯ
  • ಬೆಳಕು ಮೂಡಿತು
  • ಧರ್ಮಶ್ರೀ – (1961)
  • ದೂರ ಸರಿದರು- (1962)
  • ಮತದಾನ – (1965)
  • ವಂಶವೃಕ್ಷ- (1965)
  • ಜಲಪಾತ – (1967)
  • ನಾಯಿ ನೆರಳು- (1968)
  • ತಬ್ಬಲಿಯು ನೀನಾದೆ ಮಗನೆ-(1968)
  • ಗೃಹಭಂಗ-(1970)
  • ನಿರಾಕರಣ-(1971)
  • ಗ್ರಹಣ-(1972)
  • ದಾಟು -(1973)
  • ಅನ್ವೇಷಣ-(1976)
  • ಪರ್ವ-(1979)
  • ನೆಲೆ -(1983)
  • ಸಾಕ್ಷಿ -(1986)
  • ಅಂಚು-(1990)
  • ತಂತು -(1993)
  • ಸಾರ್ಥ-(1998)
  • ಮಂದ್ರ-(2001)
  • ಆವರಣ-(2007)
  • ಕವಲು – (2010)
  • ಯಾನ – (2014)
  • ಉತ್ತರಕಾಂಡ-(2017)

ಆತ್ಮ ಚರಿತ್ರೆ

  • ಭಿತ್ತಿ

ತತ್ತ್ವಶಾಸ್ತ್ರ

  • ಸತ್ಯ ಮತ್ತು ಸೌಂದರ್ಯ (1966) – ಪಿ.ಎಚ್.ಡಿ ಪ್ರಬಂಧ
  • ಸಾಹಿತ್ಯ ಮತ್ತು ಪ್ರತೀಕ (1967)
  • ಕಥೆ ಮತ್ತು ಕಥಾವಸ್ತು (1979)
  • ಸಂದರ್ಭ: ಸಂವಾದ (2011)

ಇತರೆ

  • ನಾನೇಕೆ ಬರೆಯುತ್ತೇನೆ? (1980)

ಇತರ ಭಾಷೆಗಳಿಗೆ ಅನುವಾದವಾಗಿರುವ ಕಾದಂಬರಿಗಳು

  • ಧರ್ಮಶ್ರೀ – ಸಂಸ್ಕೃತ, ಮರಾಠಿ
  • ವಂಶವೃಕ್ಷ – ತೆಲುಗು, ಮರಾಠಿ, ಹಿಂದಿ, ಉರ್ದು, ಇಂಗ್ಲೀಷ್ನಾ
  • ಯಿ ನೆರಳು – ಗುಜರಾತಿ, ಹಿಂದಿ
  • ತಬ್ಬಲಿಯು ನೀನಾದೆ ಮಗನೆ – ಹಿಂದಿ
  • ಗೃಹಭಂಗ – ಭಾರತದ ಹದಿನಾಲ್ಕು ಭಾಷೆಗಳಿಗೆ ಅನುವಾದವಾಗಿದೆ
  • ನಿರಾಕರಣ -ಹಿಂದಿ
  • ದಾಟು – ಇಂಗ್ಲೀಷ್, ಭಾರತದ ಹದಿನಾಲ್ಕು ಭಾಷೆಗಳಿಗೆ ಅನುವಾದವಾಗಿದೆ
  • ಅನ್ವೇಷಣ -ಹಿಂದಿ, ಮರಾಠಿ
  • ಪರ್ವ -ಹಿಂದಿ, ಮರಾಠಿ, ಇಂಗ್ಲೀಷ್, ತೆಲುಗು, ಬೆಂಗಾಲಿ, ತಮಿಳು
  • ನೆಲೆ -ಹಿಂದಿ
  • ಸಾಕ್ಷಿ – ಹಿಂದಿ, ಇಂಗ್ಲೀಷ್
  • ಅಂಚು -ಹಿಂದಿ, ಮರಾಠಿ
  • ತಂತು -ಹಿಂದಿ, ಮರಾಠಿ
  • ಸಾರ್ಥ -ಹಿಂದಿ, ಮರಾಠಿ, ಇಂಗ್ಲೀಷ್, ಸಂಸ್ಕೃತ
  • ನಾನೇಕೆ ಬರೆಯುತ್ತೇನೆ -ಮರಾಠಿ
  • ಸತ್ಯ ಮತ್ತು ಸೌಂದರ್ಯ -ಇಂಗ್ಲೀಷ್ಭಿ
  • ತ್ತಿ -ಹಿಂದಿ, ಮರಾಠಿ

ಚಲನಚಿತ್ರವಾಗಿರುವ ಕಾದಂಬರಿಗಳು

  • ವಂಶವೃಕ್ಷ – 1972
  • ತಬ್ಬಲಿಯು ನೀನಾದೆ ಮಗನೆ – 1977
  • ಮತದಾನ – 2001
  • ನಾಯಿ ನೆರಳು – 2006

ಟಿ.ವಿ. ಧಾರಾವಾಹಿಯಾಗಿರುವ ಕಾದಂಬರಿಗಳು

  • ಗೃಹಭಂಗ
  • ದಾಟು (ಹಿಂದಿ)

ಪ್ರಶಸ್ತಿ/ಗೌರವಗಳು

  • 2023 ರಲ್ಲಿ ಪದ್ಮಭೂಷಣ ಪ್ರಶಸ್ತಿ
  • ಡಾ.ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ – 2014
  • ನಾಡೋಜ ಪ್ರಶಸ್ತಿ – 2011
  • ಸರಸ್ವತಿ ಸಮ್ಮಾನ್ ಪ್ರಶಸ್ತಿ (ಮಂದ್ರ ಕಾದಂಬರಿಗೆ)- 2010
  • ಪಂಪ ಪ್ರಶಸ್ತಿ – 2005
  • ಎನ್ ಟಿ ಆರ್ ರಾಷ್ಟ್ರೀಯ ಪ್ರಶಸ್ತಿ- 2007
  • ಗುಲಬರ್ಗಾ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟು- 2007
  • ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ದಾಟು ಕಾದಂಬರಿಗೆ)- 1975
  • ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ವಂಶವೃಕ್ಷ ಕಾದಂಬರಿಗೆ) -1966

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Life of SL BhyrappaList of books by SL BhyrappaPadma Bhushan SL Bhyrappa booksRemembering SL BhyrappaSL Bhyrappa biographySL Bhyrappa contribution to Kannada literatureSL Bhyrappa death newsSL Bhyrappa famous novelsSL Bhyrappa Kannada writer life storyWorks of SL Bhyrappaಎಸ್ ಎಲ್ ಭೈರಪ್ಪ ಕನ್ನಡ ಸಾಹಿತ್ಯಎಸ್ ಎಲ್ ಭೈರಪ್ಪ ಕೃತಿಗಳುಎಸ್ ಎಲ್ ಭೈರಪ್ಪ ಜೀವನಚರಿತ್ರೆಎಸ್ ಎಲ್ ಭೈರಪ್ಪ ನಿಧನ ಸುದ್ದಿಎಸ್ ಎಲ್ ಭೈರಪ್ಪ ಪಾರ್ವಎಸ್ ಎಲ್ ಭೈರಪ್ಪ ಪ್ರಖ್ಯಾತ ಪುಸ್ತಕಗಳುಎಸ್ ಎಲ್ ಭೈರಪ್ಪ ಸಾವಿನ ನಂತರ ಜೀವನವಿಭಾಗಕನ್ನಡದ ಮಹಾನ್ ಕಾದಂಬರಿಕಾರ ಎಸ್ ಎಲ್ ಭೈರಪ್ಪಡಾ. ಎಸ್ ಎಲ್ ಭೈರಪ್ಪರು ಇನ್ನಿಲ್ಲಡಾ. ಭೈರಪ್ಪ ಹೆಸರು ಪಡೆದ ಕಾದಂಬರಿಗಳುಪದ್ಮಭೂಷಣ ಎಸ್ ಎಲ್ ಭೈರಪ್ಪ ಸಾಧನೆಲೇಖಕ ಎಸ್ ಎಲ್ ಭೈರಪ್ಪ ಬದುಕು ಮತ್ತು ಸಾಧನೆವಂಶವೃಕ್ಷ ಕೃತಿಗಳು
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram