ಚಿಕ್ಕಮಗಳೂರು: ಸಹಕಾರಿ ಧುರೀಣ, ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

ಸಖರಾಯಪಟ್ಟಣದ ಸರಪನಹಳ್ಳಿಯ ಅವರ ತೋಟದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಎಸ್.ಎಲ್ ಧರ್ಮೇಗೌಡರ ಅಂತ್ಯಸಂಸ್ಕಾರ ನಡೆಯಿತು. ಪುತ್ರ ಸೋನಾಲ್ ಅಂತಿಮ ವಿಧಿವಿಧಾನದ ಪೂಜೆ ನಡೆಸಿ, ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಅಂತ್ಯ ಸಂಸ್ಕಾರಕ್ಕೂ ಮುನ್ನ ಗಾರ್ಡ್ ಆಫ್ ಆನರ್ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

ಎಲ್.ಎಲ್ ಧರ್ಮೇಗೌಡರ ಅಂತ್ಯಸಂಸ್ಕಾರದ ವೇಳೆ ಸಿಎಂ ಯಡಿಯುರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಡಿಸಿಎಂ ಗೋವಿಂದ ಕಾರಜೋಳ, ಹೆಚ್.ಡಿ.ರೇವಣ್ಣ, ಶಾಸಕ ಶಿವಲಿಂಗೇಗೌಡ, ಶಾಸಕ ಸಿ ಟಿ ರವಿ ಅವರು ಕೂಡ ಹಾಜರಿದ್ದರು.

ಇದಕ್ಕೂ ಮುನ್ನ ಸಖರಾಯಪಟ್ಟಣದ ಕಾಲೇಜು ಆವರಣದಲ್ಲಿ ಎಸ್.ಎಲ್ ಧರ್ಮೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್?ಡಿ ದೇವೇಗೌಡ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








