ಎಸ್.ಆರ್. ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲಿಯೇ ಗುಬ್ಬಿ ಜೆಡಿಎಸ್ ಗೆ ಆಘಾತ ಎದುರಾಗಿದೆ. ಜೆಡಿಎಸ್ ನಲ್ಲಿದ್ದುಕೊಂಡೆ ಎಸ್.ಆರ್. ಶ್ರೀನಿವಾಸ್ ಅವರಿಗೆ ಪಟ್ಟಣ ಪಂಚಾಯಿತಿ ಸದಸ್ಯರು ಬಾಹ್ಯ ಬೆಂಬಲಕ್ಕೆ ನಿಂತಿದ್ದಾರೆ. ಗುಬ್ಬಿ ಪಟ್ಟಣ ಪಂಚಾಯ್ತಿಯ ಜೆಡಿಎಸ್ ಪಕ್ಷದ 9 ಸದಸ್ಯರಿಂದ ಕಾಂಗ್ರೆಸ್ ಗೆ ಬಾಹ್ಯ ಬೆಂಬಲ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿರುದ್ಧ ಪಟ್ಟಣ ಪಂಚಾಯಿತಿ ಸದಸ್ಯರು ಅಸಮಾಧಾನ ಹೊರ ಹಾಕಿದ್ದಾರೆ. ನಮಗೆ ಜೆಡಿಎಸ್ ಪಕ್ಷದ ಮೇಲೆ ಅಸಮಾಧಾನ ಇಲ್ಲ. ಕೇವಲ ಗುಬ್ಬಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ನಾಗರಾಜ ಮೇಲೆ ಅಸಮಾಧಾನ ಇದೆ ಎಂದು ಸದಸ್ಯರು ಹೇಳುತ್ತಿದ್ದಾರೆ.
ಕೆಲ ದಿನಗಳ ಹಿಂದೆ ಗುಬ್ಬಿ ಕ್ಷೇತ್ರದಲ್ಲಿ ನಡೆದ ಜೆಡಿಎಸ್ ಪಂಚರತ್ನ ಯಾತ್ರೆ ನಡೆದಿತ್ತು. ಈ ಸಂದರ್ಭದಲ್ಲಿ ವಿವಿಧ ಸಭೆ, ಸಮಾರಂಭ ಕಾರ್ಯಕ್ರಮಗಳಿಗೆ ಆಹ್ವಾನ ನೀಡದೆ ಸದಸ್ಯರನ್ನು ನಿರ್ಲಕ್ಷ್ಯ ಮಾಡಿದ್ದಾರೆ. ವಾಸಣ್ಣ ಜೆಡಿಎಸ್ ಪಕ್ಷ ಬಿಟ್ಟ ಮೇಲೆ, ಜೆಡಿಎಸ್ ಪಕ್ಷದ ಪ.ಪಂ 9 ಸದಸ್ಯರನ್ನು ನಾಗರಾಜ ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾಗಿ ನಾವು ಜೆಡಿಎಸ್ ಪಕ್ಷದಲ್ಲಿದ್ದುಕೊಂಡೇ ಕಾಂಗ್ರೆಸ್ ಗೆ ಬೆಂಬಲ ಕೊಡುತ್ತೇವೆ ಎಂದು ಹೇಳಿದ್ದಾರೆ.