S R Srinivas : ಶಾಸಕ ಸ್ಥಾನಕ್ಕೆ ಗುಬ್ಬಿ ಶಾಸಕ ರಾಜೀನಾಮೆ ; ಜೆಡಿಎಸ್ ಪಕ್ಷ ತೊರೆಯಲು ಮುಂದಾದ ಕಾರ್ಯಕರ್ತರು….
ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಜೆಡಿಎಸ್ ಪಕ್ಷದಿಂದ ಉಚ್ಚಾಟನೆಗೊಂಡ ಬೆನ್ನಲ್ಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಳೆ ಅಂದರೆ ಮಾರ್ಚ್ 27ರಂದು ಸೋಮವಾರ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶ್ರೀನಿವಾಸ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಶಾಸಕರ ರಾಜೀನಾಮೆ ಬೆನ್ನಲ್ಲೆ ಗುಬ್ಬಿ ಕ್ಷೇತ್ರದಲ್ಲಿ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣೆ ವೇಳೆ ದಳಪತಿಗಳಿಗೆ ಮತ್ತೊಂದು ಆಘಾತ ನೀಡಿದ್ದಾರೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಜಿ.ಹೊಸಳ್ಳಿ ಗ್ರಾಮದಲ್ಲಿ ರಾಜಿನಾಮೆ ಪರ್ವ ಶುರುವಾಗಿದ್ದು, 300ಕ್ಕೂ ಹೆಚ್ಚು JDS ಮುಖಂಡರು, ಕಾರ್ಯಕರ್ತ, ಜೆಡಿಎಸ್ ಬೂತ್ ಕಮಿಟಿ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಕಚೇರಿಗೆ ರವಾನಿಸಿದ್ದಾರೆ.
ರಾಜೀನಾಮೆ ಬಳಿಕ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ. ಶ್ರೀನಿವಾಸ್ ಪಕ್ಷ ಸೇರ್ಪಡೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಗುಬ್ಬಿ ಕ್ಷೇತ್ರದ ಟಿಕೆಟ್ ಅನ್ನ ಪ್ರಕಟಿಸಿಲ್ಲ. ಆದ್ರೆ, ಗುಬ್ಬಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಪಕ್ಕಾ ಆಗಿದೆ.
S R Srinivas: Gubi MLA resigns as MLA; Activists ready to leave JDS party…