ಮೈಸೂರು : ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಗೆಲ್ಲೋಕೆ ಆಗಲ್ಲ. ಅದಕ್ಕೆ ಡಿ.ಕೆ.ಶಿವಕುಮಾರ್ ( D.K.Shivakumar) ಅವರು ಪಿಳ್ಳೆನೆಪ ಹುಡುಕಿಕೊಂಡು ಮಾತನಾಡುತ್ತಿದ್ದಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ( S.T.Somashekhar) ಹೇಳಿದ್ದಾರೆ.
ಆರ್ ಆರ್ ನಗರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಮೇಲೆ ಎಫ್ ಐ ಆರ್ ಆಗಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ( D.K.Shivakumar) ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದರು.
ಇದಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸೋಮಶೇಖರ್ (( S.T.Somashekhar), ನೀತಿ ಸಂಹಿತೆ ಯಾರೇ ಉಲ್ಲಂಘನೆ ಮಾಡಿದರೂ ಎಫ್ ಐಆರ್ ಹಾಕುತ್ತಾರೆ.
ಇದನ್ನೂ ಓದಿ : ಆರ್.ಆರ್ ನಗರ ಫಲಿತಾಂಶ ಬಿಬಿಎಂಪಿ ಚುನಾವಣೆಯ ದಿಕ್ಸೂಚಿ : ಸಚಿವ ಸುಧಾಕರ್
ಕಳೆದ ಬಾರಿ ಮುನಿರತ್ನ ಮೇಲೂ ಎಫ್ ಐಆರ್ ಹಾಕಿದ್ದರು. ಸ್ವಲ್ಪ ವ್ಯತ್ಯಾಸ ಆಗಿದ್ದರೆ ಮುನಿರತ್ನ ಜೈಲಿಗೆ ಹೋಗಬೇಕಿತ್ತು.
ಈಗ ಕೋರ್ಟ್ ತೀರ್ಪು ಬಂದು ಮತ್ತೆ ಚುನಾವಣೆಗೆ ನಿಲ್ತಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಸುಮ್ಮನೆ ಆರೋಪ ಮಾಡ್ತಿದ್ದಾರೆ.
ಅವರಿಗೆ ಆರ್ ಆರ್ ನಗರದಲ್ಲಿ ಗೆಲ್ಲೋಕೆ ಆಗೋಲ್ಲ ಅಂತ ಹೀಗೆಲ್ಲ ಪಿಳ್ಳೆ ನೆಪ ಹುಡುಕಿಕೊಂಡು ಮಾತನಾಡುತ್ತಾರೆ ಎಂದು ಡಿಕೆಶಿ ವಿರುದ್ಧ ಸೋಮಶೇಖರ್ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ : ನಾವು ಮುಂದೆ ರಾಜ್ಯಕ್ಕೆ ಅಭಿವೃದ್ದಿ ಸರ್ಕಾರ ಕೊಡುತ್ತೇವೆ : ಡಿಕೆಶಿ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










