ನಮ್ಮನ್ನು ಸಿದ್ದರಾಮಯ್ಯ ಬೆಳೆಸಿಲ್ಲ : ಎಸ್.ಟಿ.ಸೋಮಶೇಖರ್ ( S T Somashekhar ) ವಾಗ್ದಾಳಿ
ಮೈಸೂರು : ನಮ್ಮನ್ನು ಸಿದ್ದರಾಮಯ್ಯ ಬೆಳೆಸಿಲ್ಲ, ನಾವು ಮೊದಲಿನಿಂದ ಕಾಂಗ್ರೆಸ್ ನಲ್ಲಿದ್ದೆವು. ಸಿದ್ದರಾಮಯ್ಯ ಕೊನೆಯಲ್ಲಿ ಸೇರಿದ್ದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ( ( S T Somashekhar ) ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮೈಸೂರು ನಗರದ ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್.ಟಿ.ಸೋಮಶೇಖರ್, ಸಿದ್ದರಾಮಯ್ಯ ಅವರ ಕ್ಷೇತ್ರದ ಅಭಿವೃದ್ಧಿಗೆ ನಿನ್ಗೆ ದುಡ್ಡು ಕೊಟ್ಟಿದ್ದು ಯಾರಪ್ಪ ಮುನಿರತ್ನ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಶೇ.100 ರಷ್ಟು ಮುನಿರತ್ನ ಗೆಲ್ಲುತ್ತಾರೆ. ಆರ್ ಆರ್ ನಗರ ಕ್ಷೇತ್ರವನ್ನು ಮುನಿರತ್ನ ಅಭಿವೃದ್ಧಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಆದಾಯ ಹೆಚ್ಚಿದೆ. ಹೀಗಾಗಿ ಅಭಿವೃದ್ಧಿ ಹಣ ಬಿಡುಗಡೆಯಾಗಿದೆ.
ಬಜೆಟ್ ನಲ್ಲಿ ಕೊಟ್ಟ ಹಣವನ್ನು ಮುನಿರತ್ನ ಸರಿಯಾಗಿ ಅವರ ಕ್ಷೇತ್ರಕ್ಕೆ ಬಳಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರ ಮನೆಯಿಂದ ಹಣ ತಂದು ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ : ಕ್ಷೇತ್ರದ ಅಭಿವೃದ್ಧಿಗೆ ನಿನ್ಗೆ ದುಡ್ಡು ಕೊಟ್ಟಿದ್ದು ಯಾರಪ್ಪ ಮುನಿರತ್ನ : ಸಿದ್ದರಾಮಯ್ಯ
ನಮ್ಮನ್ನು ಸಿದ್ದರಾಮಯ್ಯ ಬೆಳೆಸಿಲ್ಲ, ನಾವು ಮೊದಲಿನಿಂದ ಕಾಂಗ್ರೆಸ್ ನಲ್ಲಿದ್ದೆವು. ಸಿದ್ದರಾಮಯ್ಯ ಕೊನೆಯಲ್ಲಿ ಸೇರಿದ್ದು ಎಂದ ಸೋಮಶೇಖರ್, ನಾವೇನೂ ಸಿದ್ದರಾಮಯ್ಯನವರಿಗೆ ಕೆಟ್ಟ ಹೆಸರು ತರುವ ಕೆಲಸ ಮಾಡಿಲ್ಲ.
ಅವರ ಮೇಲೆ ಮುನಿಸಿಕೊಂಡು ಪಕ್ಷ ಬಿಟ್ಟಿಲ್ಲ. ಆಗ ಉಂಟಾಗಿದ್ದ ಸಮಸ್ಯೆ ಬಗೆಹರಿಸುವುದನ್ನು ಬಿಟ್ಟು ಈಗ ಒದ್ದಾಡಿದರೆ ಏನೂ ಪ್ರಯೋಜನ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ದಸರಾ ಆಚರಣೆ ಲೆಕ್ಕ ಕೊಟ್ಟ ಸಚಿವರು
ಇದೇ ವೇಳೆ ದಸರಾ ಲೆಕ್ಕವನ್ನು ಬಿಡುಗಡೆ ಮಾಡಿದ ಸೋಮಶೇಖರ್, “ಈ ಬಾರಿ ಅತಿ ಸರಳವಾಗಿ ದಸರಾ ಆಚರಿಸಲಾಗಿದ್ದು, 2.5 ಕೋಟಿ ರೂ. ವೆಚ್ಚವಾಗಿದೆ. ಸರ್ಕಾರದಿಂದ ಒಟ್ಟು 9.14 ಕೋಟಿ ರೂಪಾಯಿ ಬಿಡುಗಡೆಯಾಗಿತ್ತು. ಇದರಲ್ಲಿ 2.5 ಕೋಟಿ ರೂ. ಖರ್ಚಾಗಿದ್ದು, 7.8 ಕೋಟಿ ರೂ. ಉಳಿತಾಯವಾಗಿದೆ ಎಂದು ತಿಳಿಸಿದರು.
ಮೈಸೂರು ಸರಳ ದಸರಾಗೆ 2,05,83,167 ರೂ. ಖರ್ಚಾಗಿದೆ. 23 ವಿಭಾಗಕ್ಕೆ ಜಿಲ್ಲಾಡಳಿತ ಹಣ ಖರ್ಚು ಮಾಡಿದೆ. ಅತಿ ಹೆಚ್ಚು ಎಂದರೆ ಸಾಂಸ್ಕøತಿಕ ಕಾರ್ಯಕ್ರಮ ನಿರ್ವಹಣೆ ಹಾಗೂ ಕಲಾವಿದರಿಗೆ 44 ಲಕ್ಷ ಹಣ ಖರ್ಚಾಗಿದೆ.
ದಸರಾ ಆನೆಗಳ ನಿರ್ವಹಣೆಗೆ 35 ಲಕ್ಷ ರೂ., ಎರಡು ವೇದಿಕೆಗೆ 41 ಲಕ್ಷ ರೂ, ರಾಜವಂಶಸ್ಥರಿಗೆ ಗೌರವ ಧನವಾಗಿ 40 ಲಕ್ಷ ರೂ., ಶ್ರೀರಂಗಪಟ್ಟಣ ದಸರಾಗೆ 50 ಲಕ್ಷ ರೂ. ಚಾಮರಾಜನಗರ ದಸರಾಗೆ 36 ಲಕ್ಷ ರೂ. ಸೇರಿ ಒಟ್ಟು 2,91,83,167. ರೂ. ಹಣ ಖರ್ಚಾಗಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಜೋಡೆತ್ತು..ಯಾರೇ ಬಂದ್ರೂ ನಮ್ದೆ ಗೆಲುವು; ಡಿಕೆಶಿ, ಸಿದ್ದುಗೆ ಜೋಶಿ-ಶೆಟ್ಟರ್ ಗುದ್ದು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel