ಡಿಕೆಶಿ ಸುಮ್ಮನಿದ್ದರೇ ಒಳ್ಳೇದು ಇಲ್ಲದಿದ್ದರೆ.. : ಎಸ್.ಟಿ.ಸೋಮಶೇಖರ್ ಎಚ್ಚರಿಕೆ
ಮೈಸೂರು : ರಾಜ್ಯ ಬಿಜೆಪಿ ಕಮಿಷನ್ ದಂಧೆ ನಡೆಸುತ್ತಿದೆ. ಇದು ಕಮಿಷನ್ ಸರ್ಕಾರ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ” ಅವರು ಸುಮ್ಮನಿದ್ದರೆ ಒಳ್ಳೆಯದು.
ಇಲ್ಲದಿದ್ದರೆ ಅವರೆಷ್ಟು ಕಮಿಷನ್ ಪಡೆದಿದ್ದರು ಎಂಬುದನ್ನು ಬಹಿರಂಗಪಡಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸೋಮಶೇಖರ್, ‘ನಾನು ಕೂಡ ಐದು ವರ್ಷ ಕಾಂಗ್ರೆಸ್ ಸರ್ಕಾರಲ್ಲಿ ಇದ್ದವನು.
ಎಲ್ಲಾ ವಿಚಾರ ಗೊತ್ತು. ಹೀಗಾಗಿ, ಕಮಿಷನ್ ಆರೋಪ ಶೋಭೆ ತರುವಂಥದಲ್ಲ. ರಾಜ್ಯ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ.
ಕೋವಿಡ್ ಲಾಕ್ಡೌನ್ ಕಾರಣ ಏಳೆಂಟು ತಿಂಗಳು ಅಭಿವೃದ್ಧಿ ಕಾರ್ಯ ನಡೆದಿರಲಿಲ್ಲ. ಈಗ ಮತ್ತೆ ಅಭಿವೃದ್ಧಿ ಕಾರ್ಯಗಳು ವೇಗ ಪಡೆದುಕೊಂಡಿವೆ. ಇಷ್ಟು ದಿನ ಮಲಗಿದ್ದ ಕಾಂಗ್ರೆಸ್ ನವರು ಈಗ ಎದ್ದಿದ್ದಾರೆ ಎಂದು ಲೇವಡಿ ಮಾಡಿದರು.
ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೆಎಸ್ ಆರ್ ಟಿಸಿ
ಇನ್ನು ನಮ್ಮನ್ನು ಖರೀದಿಸಲು ಯಾರಿಗೂ ಸಾಧ್ಯವಿಲ್ಲ. ಚೆಲುವರಾಯಸ್ವಾಮಿ ಹಾಗೂ ಇತರರು ಕಾಂಗ್ರೆಸ್ ಸೇರಿದಾಗ ಅವರನ್ನು ಮುಂಬೈನಲ್ಲಿ ಇರಿಸುವ ಜವಾಬ್ದಾರಿ ಹೊತ್ತಿದ್ದೇ ನಾನು.
ಆಗ ಏನೆಲ್ಲ ನಡೆಯಿತು ಎಂದು ಹೇಳಲೇ ಎಂದು ಸಿದ್ದರಾಮಯ್ಯ ಅವರಿಗೆ ಸೋಮಶೇಖರ್ ತಿರುಗೇಟು ನೀಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









