SA vs IND | ಹರಿಣಗಳ ಬೇಟೆ ಟೀಂ ಇಂಡಿಯಾ ಪ್ಲೇಯಿಂಗ್ 11 ಹೇಗಿರಲಿದೆ..?
ಇಂಡೋ – ಆಫ್ರಿಕಾ ನಡುವಿನ ಟಿ 20 ಸರಣಿಯ ಭಾಗವಾಗಿ ಇಂದು ಕಟಕ್ ನಲ್ಲಿ ಎರಡನೇ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈ ಪಂದ್ಯಕ್ಕಾಗಿ ಸಾಕಷ್ಟು ಕಸರತ್ತು ನಡೆಸಿವೆ.
ಈಗಾಗಲೇ ಮೊದಲ ಟಿ 20 ಪಂದ್ಯದಲ್ಲಿ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಎರಡನೇ ಪಂದ್ಯದಲ್ಲಿ ಗೆದ್ದು ಸರಣಿಯಲ್ಲಿ ಪ್ರಾಬಲ್ಯ ಸಾಧಿಸಲು ಪ್ಲಾನ್ ಮಾಡಿಕೊಂಡಿದೆ.
ಇತ್ತ ಮೊದಲ ಪಂದ್ಯದಲ್ಲಿ ಸೋಲು ಕಂಡಿರುವ ಟೀಮ್ ಇಂಡಿಯಾ ಇಂದಿನ ಪಂದ್ಯದಲ್ಲಿ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಲು ತಯಾರಿ ನಡೆಸಿದೆ.
ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 211 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ 19.1 ಓವರ್ ಗಳಲ್ಲಿ 212 ರನ್ ಗಳಿಸಿ ಗೆಲುವಿನ ನಗೆ ಬೀರಿತ್ತು.
ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ಬೊಂಬಾಟ್ ಆಗಿದ್ದರೂ ಬೌಲಿಂಗ್ ವಿಭಾಗ ಸಂಪೂರ್ಣವಾಗಿ ವಿಫಲವಾಗಿತ್ತು. ಹೀಗಾಗಿ ಇಂದು ಕಟಕ್ ನಲ್ಲಿ ನಡೆಯಲಿರುವ 2ನೇ ಪಂದ್ಯಕ್ಕಾಗಿ ಟೀಂ ಇಂಡಿಯಾ ಸಜ್ಜಾಗಿದೆ.
ಕಟಕ್ ನ ಭಾರಾಮತಿ ಕ್ರೀಡಾಂಗಣದಲ್ಲಿ 2ನೇ ಟಿ20 ಪಂದ್ಯ ನಡೆಯಲಿದೆ. ಈ ಪಂದ್ಯ ಟೀಮ್ ಇಂಡಿಯಾದ ಪಾಲಿಗೆ ಒಂದು ರೀತಿಯಲ್ಲಿ ಮಾಡು ಇಲ್ಲವೆ ಮಡಿ ಇದ್ದ ಹಾಗೇ.
ಹೀಗಾಗಿ ಇಂದಿನ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಒಂದಿಷ್ಟು ಬದಲಾವಣೆಗಳು ಆಗುವ ಸಾದ್ಯತೆಗಳಿವೆ. ಯಾಕಂದರೇ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗ ಸಾಲಿಡ್ ಪ್ರದರ್ಶನ ನೀಡಿದೆ.

ಆರಂಭಿಕರಾದ ಇಶನ್ ಕಿಶನ್, ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭ ನೀಡಿದ್ರು. ಒನ್ ಡೌನ್ ನಲ್ಲಿ ಬಂದ ಶ್ರೇಯಸ್ ಅಯ್ಯರ್ ಸಮಯಕ್ಕೆ ತಕ್ಕಂತೆ ಬ್ಯಾಟ್ ಬೀಸುತ್ತಿದ್ದಾರೆ.
ಇನ್ನು ಮಿಡಲ್ ಆರ್ಡರ್ ನಲ್ಲಿ ರಿಷಬ್ ಪಂತ್ ಮಿಂಚಿನ ಪ್ರದರ್ಶನ ನೀಡುತ್ತಿದ್ದರೇ, ನಂತರ ಬರುವ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ವಿಸ್ಫೋಟಕ ಆಟವಾಡಿ ಪಂದ್ಯದ ಗತಿಯನ್ನ ಬದಲಿಸಬಲ್ಲರು.
ಇನ್ನು ಸ್ಪಿನ್ ಆಲ್ ರೌಂಡರ್ ವಿಭಾಗದಲ್ಲಿ ಅಕ್ಷರ್ ಪಟೇಲ್ ಸಮಯೋಚಿತ ಬ್ಯಾಟಿಂಗ್ ಜೊತೆಗೆ ಬೌಲಿಂಗ್ ನಲ್ಲಿ ಕೂಡ ಪ್ರಮುಖ ಅಸ್ತ್ರವಾಗಿದ್ದಾರೆ.
ಆದ್ರೆ ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲಿಂಗ್ ವಿಭಾಗ ಸಂಪೂರ್ಣವಾಗಿ ವಿಫಲವಾಗಿದೆ. 211 ರನ್ ಗಳನ್ನು ಡಿಫೆಂಡ್ ಮಾಡಿಕೊಳ್ಳುವಲ್ಲಿ ಭಾರತದ ಬೌಲರ್ ಗಳು ಕಂಪ್ಲೀಟ್ ಆಗಿ ವೈಫಲ್ಯ ಅನುಭವಿಸಿದ್ರು.
ಹೀಗಾಗಿ ಟೀಂ ಇಂಡಿಯಾದ ಬೌಲರ್ ಗಳು ಇಂದಿನ ಪಂದ್ಯದಲ್ಲಿ ಕಂ ಬ್ಯಾಕ್ ಮಾಡಬೇಕಾಗಿದೆ. ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಯುಜುವೇಂದ್ರ ಚಹಾಲ್ ಸಾಮರ್ಥ್ಯಕ್ಕೆ ತಕ್ಕಂತೆ ಪ್ರದರ್ಶನ ನೀಡಬೇಕಾಗಿದೆ.
ಆದ್ರೆ ಇಂದಿನ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಒಂದಿಷ್ಟು ಬದಲಾವಣೆಗಳಾಗಲಿವೆ. ಅಕ್ಷರ್ ಪಟೇಲ್, ಆವೇಶ್ ಖಾನ್ ಬದಲಿಗೆ ಹೊಸ ವೇಗದ ಬೌಲರ್ ಗಳಿಗೆ ಅವಕಾಶ ನೀಡಬಹುದು ಎಂದು ಅಂದಾಜಿಸಲಾಗಿದೆ.
ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೀಗಿದೆ.
ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಸಿ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್ / ಉಮ್ರಾನ್ ಮಲಿಕ್