sa vs ind test | ಟಾಸ್ ಗೆದ್ದ ಟೀಂ ಇಂಡಿಯಾ.. ಬ್ಯಾಟಿಂಗ್ ಆಯ್ಕೆ V kohli saaksha tv
ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಸೆಂಚೂರಿಯನ್ ನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಭಾರಿ ಕುತೂಹಲ ಕೆರಳಿಸಿದೆ.
ಭಾರತದ ಪ್ಲೇಯಿಂಗ್ ಇಲೆವೆನ್ ಹೀಗಿದೆ
ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ(ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬ್ಯಾಡ್ ಫಾರ್ಮ್ ನಿಂದಾಗಿ ಅಜಿಂಕ್ಯಾ ರಹಾನೆ ಅವರನ್ನು ಡ್ರಾಪ್ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೆ ಅವರಿಗೆ ಮತ್ತೊಂದು ಚಾನ್ಸ್ ನೀಡಲಾಗಿದೆ. ಇತ್ತ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ್ದ ಶ್ರೇಯಸ್ ಅಯ್ಯರ್ ಅವರಿಗೆ ಅವಕಾಶ ಸಿಕ್ಕಿಲ್ಲ. ಇನ್ನು ಅನುಭವಿ ವೇಗಿ ಇಶಾಂತ್ ಶರ್ಮಾ ಅವರನ್ನೂ ಕೂರಿಸಲಾಗಿದೆ









