ರುಚಿಯಾದ ಬಟಾಣಿ ರವೆ ಇಡ್ಲಿ
ಬೇಕಾಗುವ ಸಾಮಗ್ರಿಗಳು
ಬಟಾಣಿ – 1ಕಪ್
ಸಾಸಿವೆ – 1 ಚಮಚ
ಕರಿಬೇವಿನ ಸೊಪ್ಪು – ಸ್ವಲ್ಪ
ಈರುಳ್ಳಿ – 2
ಹಸಿಮೆಣಸಿನಕಾಯಿ – 6
ಚಿರೋಟಿ ರವೆ – 1 ಕಪ್
ಗಟ್ಟಿ ಮೊಸರು – 1 ಕಪ್
ತುರಿದ ಕ್ಯಾರೆಟ್ – 1/2ಕಪ್
ಶುಂಠಿ – 1 ಇಂಚು
ರುಚಿಗೆ ತಕ್ಕಷ್ಟು ಉಪ್ಪು
ಅಗತ್ಯವಿರುವಷ್ಟು ನೀರು

ಮಾಡುವ ವಿಧಾನ
ಮೊದಲಿಗೆ ಬಟಾಣಿಯನ್ನು ಬೇಯಿಸಿ ಇಟ್ಟುಕೊಳ್ಳಿ. ನಂತರ ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಬಳಿಕ ಅದಕ್ಕೆ ಚಿಕ್ಕದಾಗಿ ಕತ್ತರಿಸಿದ ಈರುಳ್ಳಿ ಮತ್ತು ಹಸಿಮೆಣಸಿನಕಾಯಿ, ಕರಿಬೇವಿನ ಸೊಪ್ಪು ಹಾಕಿ ಹುರಿಯಿರಿ. ಚಿರೋಟಿ ರವೆ ಸೇರಿಸಿ ಕೆಂಪಗಾಗುವವರೆಗೆ ಚೆನ್ನಾಗಿ ಹುರಿಯಿರಿ. ಈಗ ಅದಕ್ಕೆ ಕ್ಯಾರೆಟ್, ಸಣ್ಣಗೆ ತುರಿದ ಶುಂಠಿ, ಬೇಯಿಸಿದ ಬಟಾಣಿ, ಗಟ್ಟಿ ಮೊಸರು ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ರುಚಿಗೆ ತಕ್ಕಷ್ಟು ಉಪ್ಪು ಮತ್ತು ಅಗತ್ಯವಿರುವಷ್ಟು ನೀರು ಸೇರಿಸಿ ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ. 20 ನಿಮಿಷ ಹಾಗೆಯೇ ಬಿಡಿ. ಬಳಿಕ ಇಡ್ಲಿ ಪಾತ್ರೆಯಲ್ಲಿ 20 ನಿಮಿಷ ಬೇಯಿಸಿ. ಈಗ ರುಚಿಕರವಾದ ಬಟಾಣಿ ರವೆ ಇಡ್ಲಿ ಸವಿಯಲು ಸಿದ್ಧವಾಗಿದೆ

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ಮೈಗ್ರೇನ್ ಮತ್ತು ಸಾಮಾನ್ಯ ತಲೆನೋವಿಗೆ ಇರುವ ವ್ಯತ್ಯಾಸಗಳೇನು https://t.co/F0IYfpSmuX
— Saaksha TV (@SaakshaTv) September 13, 2021
https://twitter.com/SaakshaTv/status/1437614126172459009?s=19
https://twitter.com/SaakshaTv/status/1437575029944950784?s=19
https://twitter.com/SaakshaTv/status/1437248216618045441?s=19
#Saakshatv #cooking #batani #Rava #idli








