ಕ್ಯಾರಟ್ – ಈರುಳ್ಳಿ ಮಸಾಲೆ ರೊಟ್ಟಿ
ಬೇಕಾಗುವ ಸಾಮಗ್ರಿಗಳು
ಅಕ್ಕಿ ಹಿಟ್ಟು – 2ಕಪ್
ಜೀರಿಗೆ – 1ಚಮಚ
ಇಂಗು -1/4 ಚಮಚ
ಅರಿಶಿನ – 1/4 ಚಮಚ
ಕರಿಮೆಣಸಿನ ಪುಡಿ – 1/4 ಚಮಚ
ಕಡ್ಲೆಬೇಳೆ – 2 ಚಮಚ
ತುರಿದ ಕ್ಯಾರಟ್ – 1/4 ಕಪ್
ಸಣ್ಣಗೆ ಹೆಚ್ಚಿದ ಈರುಳ್ಳಿ – 1/4 ಕಪ್
ಕೊತ್ತಂಬರಿಸೊಪ್ಪು – ಸ್ವಲ್ಪ
ಹಸಿಮೆಣಸಿನಕಾಯಿ – 2
ಕರಿಬೇವಿನ ಸೊಪ್ಪು
ರುಚಿಗೆ ತಕ್ಕಷ್ಟು ಉಪ್ಪು
ಮಾಡುವ ವಿಧಾನ
ಮೊದಲಿಗೆ ಕಡ್ಲೆಬೇಳೆಯನ್ನು 30 ನಿಮಿಷಗಳ ಕಾಲ ನೀರಿನಲ್ಲಿ ನೆನೆಸಿ. ನಂತರ ಒಂದು ಪಾತ್ರೆಯಲ್ಲಿ ಅಕ್ಕಿ ಹಿಟ್ಟು, ಜೀರಿಗೆ, ಇಂಗು, ಅರಿಶಿನ, ಕರಿಮೆಣಸಿನ ಪುಡಿ, ತುರಿದ ಕ್ಯಾರಟ್, ಈರುಳ್ಳಿ, ಕೊತ್ತಂಬರಿ ಸೊಪ್ಪು, ನೆನೆಸಿಟ್ಟ ಕಡ್ಲೆಬೇಳೆ, ಹಸಿಮೆಣಸಿನಕಾಯಿ, ಸಣ್ಣಗೆ ಕತ್ತರಿಸಿದ ಕರಿಬೇವು, ಉಪ್ಪು, 1 ಚಮಚ ಎಣ್ಣೆ ಸೇರಿಸಿ ಚೆನ್ನಾಗಿ ಬೆರೆಸಿ.
ನಂತರ ಸ್ವಲ್ಪ ಸ್ವಲ್ಪವೇ ಬೆಚ್ಚಗಿರುವ ನೀರು ಸೇರಿಸಿ ರೊಟ್ಟಿ ಹಿಟ್ಟಿನ ಹದಕ್ಕೆ ಕಲಸಿ. 15 ರಿಂದ 20ನಿಮಿಷಗಳ ಕಾಲ ಹಾಗೆಯೇ ಮುಚ್ಚಿಡಿ.
ಬಳಿಕ ತವಾ ವನ್ನು ಬಿಸಿ ಮಾಡಿ. ತೆಳುವಾಗಿ ರೊಟ್ಟಿ ತಟ್ಟಿ, ಎರಡೂ ಬದಿಗಳನ್ನು ಹೊಂಬಣ್ಣಕ್ಕೆ ಬರುವವರೆಗೆ ಕಾಯಿಸಿ ತೆಗೆಯಿರಿ. ರುಚಿಯಾದ ಕ್ಯಾರಟ್ – ಈರುಳ್ಳಿ ಮಸಾಲೆ ರೊಟ್ಟಿ ಸವಿಯಲು ಸಿದ್ಧ.
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ಉತ್ತಮ ಆದಾಯ ನೀಡುವ ಅಂಚೆ ಕಚೇರಿಯ 7 ಯೋಜನೆಗಳು#postofficeschemes https://t.co/Wi9syUu1S5
— Saaksha TV (@SaakshaTv) June 27, 2021
ಸಾಸಿವೆ ಎಣ್ಣೆಯ ಆರೋಗ್ಯ ಪ್ರಯೋಜನಗಳು#Saakshatv #healthtips #Mustardoil https://t.co/Wq9REM7Arz
— Saaksha TV (@SaakshaTv) June 27, 2021
ಕಡ್ಲೆಬೇಳೆ ಮಸಾಲೆ ವಡೆ#Saakshatv #cookingrecipe #masalavade https://t.co/tzZADVNKSM
— Saaksha TV (@SaakshaTv) June 27, 2021
ಮಾವಿನ ಹಣ್ಣಿನ ಸಿಪ್ಪೆಯ ಆರೋಗ್ಯ ಪ್ರಯೋಜನಗಳು#mangopeel #healthbenefits https://t.co/6Gee3KyOpO
— Saaksha TV (@SaakshaTv) June 26, 2021
ಟೋಕಿಯೊದಲ್ಲಿ ಕೊರೋನಾ ಸೋಂಕು ಹೆಚ್ಚಳ – ಒಲಿಂಪಿಕ್ ಕ್ರೀಡಾಕೂಟ ರದ್ದುಗೊಳಿಸುವಂತೆ ಆಗ್ರಹ#OlympicGames https://t.co/97mIY48IEe
— Saaksha TV (@SaakshaTv) June 30, 2021
#Saakshatv #cookingrecipe #carrotsakki #rotti