ಪನೀರ್ ಬಿರಿಯಾನಿ
ಬೇಕಾಗುವ ಸಾಮಗ್ರಿಗಳು
ಪನೀರ್ – 500 ಗ್ರಾಂ
ಬಾಸುಮತಿ ಅಕ್ಕಿ – 2 ಕಪ್,
ತುಪ್ಪ- 5 ಚಮಚ
ಜೀರಿಗೆ – 1 ಚಮಚ
ಎಣ್ಣೆ – 2 ಚಮಚ
ಈರುಳ್ಳಿ – 3 ಉದ್ದಕ್ಕೆ ಸೀಳಿಕೊಳ್ಳಿ,
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 2 ಚಮಚ
ಚಕ್ಕೆ-1 ತುಂಡು,
ಏಲಕ್ಕಿ – 2
ಲವಂಗ – 4
ಪಲಾವ್ ಎಲೆ – 1
ಹಸಿಮೆಣಸು – 5
ಕ್ಯಾರೆಟ್ – 2
ಕೊತ್ತಂಬರಿ ಸೊಪ್ಪು – ಸ್ವಲ್ಪ
ಪುದೀನಾ ಸೊಪ್ಪು – ಸ್ವಲ್ಪ
ನೀರು – 4 ಕಪ್
ರುಚಿಗೆ ತಕ್ಕಷ್ಟು ಉಪ್ಪು

ಮಾಡುವ ವಿಧಾನ:
ಅಕ್ಕಿಯನ್ನು ಚೆನ್ನಾಗಿ ತೊಳೆದು 20 ನಿಮಿಷಗಳ ಕಾಲ ನೆನೆಸಿಡಿ. ನಂತರ ಪಾತ್ರೆಗೆ ತುಪ್ಪ, ಎಣ್ಣೆ ಹಾಕಿ ಬಿಸಿ ಮಾಡಿ. ಇದಕ್ಕೆ ಪನೀರ್ ಅನ್ನು ಕತ್ತರಿಸಿ ಹಾಕಿ ಕೆಂಪಗಾಗುವಂತೆ ಹುರಿದು ತೆಗೆಯಿರಿ. ನಂತರ ಆ ಪಾತ್ರೆಗೆ ಚಕ್ಕೆ, ಲವಂಗ, ಏಲಕ್ಕಿ, ಪಲಾವ್ ಎಲೆ ಹಾಕಿ ಸ್ವಲ್ಪ ಹೊತ್ತು ಹುರಿಯಿರಿ. ನಂತರ ಉದ್ದಕ್ಕೆ ತೆಳುವಾಗಿ ಕತ್ತರಿಸಿದ ಈರುಳ್ಳಿ ಸೇರಿಸಿ ಕೆಂಪಗಾಗುವವರೆಗೆ ಹುರಿಯಿರಿ. ಬಳಿಕ ಇದಕ್ಕೆ ಉದ್ದಕ್ಕೆ ಕತ್ತರಿಸಿದ ಹಸಿಮೆಣಸು, ಸಣ್ಣಗೆ ಕತ್ತರಿಸಿದ ಕ್ಯಾರೆಟ್, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ ಹುರಿಯಿರಿ. ನಂತರ ಇದಕ್ಕೆ ಅಗತ್ಯವಿರುವಷ್ಟು ನೀರು ಸೇರಿಸಿ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕುದಿಸಿ. ಬಳಿಕ ಅಕ್ಕಿ ಸೇರಿಸಿ, ಚೆನ್ನಾಗಿ ಬೇಯಿಸಿ. ನಂತರ ಹುರಿದ ಪನೀರ್, ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿಸೊಪ್ಪು, ಪುದೀನಾ ಸೊಪ್ಪು ಹಾಕಿ ಒಂದು ಮುಚ್ಚಳ ಮುಚ್ಚಿ ಸಣ್ಣ ಉರಿಯಲ್ಲಿ 10 ನಿಮಿಷಗಳ ಕಾಲ ಬೇಯಿಸಿಕೊಳ್ಳಿ. ರುಚಿಯಾದ ಪನೀರ್ ಬಿರಿಯಾನಿ ಸವಿಯಲು ಸಿದ್ಧವಾಗಿದೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1440149327762968580?s=19
https://twitter.com/SaakshaTv/status/1440112164430389249?s=19
https://twitter.com/SaakshaTv/status/1440496744597360646?s=19
https://twitter.com/SaakshaTv/status/1440513434420846592?s=19
#Saakshatv #cookingrecipe #paneerbiryani








