ರವೆ ವಡೆ
ಬೇಕಾಗುವ ಸಾಮಗ್ರಿಗಳು
ರವೆ – 1 ಕಪ್
ಅಕ್ಕಿ ಹಿಟ್ಟು – 1/2 ಕಪ್
ಈರುಳ್ಳಿ – 2
ಕರಿಬೇವಿನ ಸೊಪ್ಪು – ಸ್ವಲ್ಪ
ಕೊತ್ತಂಬರಿಸೊಪ್ಪು – ಸ್ವಲ್ಪ
ಮೆಣಸಿನ ಪುಡಿ – 1 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಎಣ್ಣೆ

ಮಾಡುವ ವಿಧಾನ
ಮೊದಲಿಗೆ ಒಂದು ಪಾತ್ರೆಯಲ್ಲಿ ಅಕ್ಕಿ ಹಿಟ್ಟು, ರವೆ, ಉಪ್ಪು, ಮೆಣಸಿನ ಪುಡಿ, ಚಿಕ್ಕದಾಗಿ ಹೆಚ್ಚಿದ ಕರಿಬೇವಿನ ಸೊಪ್ಪು, ಈರುಳ್ಳಿ ಮತ್ತು ಕೊತ್ತಂಬರಿ ಸೊಪ್ಪು ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ನಂತರ ಎರಡು ಚಮಚ ಬಿಸಿ ಎಣ್ಣೆ ಸೇರಿಸಿ. ಸ್ವಲ್ಪ ಸ್ವಲ್ಪವೇ ನೀರನ್ನು ಸೇರಿಸಿ ಹಿಟ್ಟನ್ನು ರೊಟ್ಟಿ ಹದಕ್ಕೆ ಬರುವವರೆಗೆ ಚೆನ್ನಾಗಿ ಕಲಸಿ. ಈಗ ಸಣ್ಣ ಸಣ್ಣ ಉಂಡೆಗಳನ್ನು ಮಾಡಿ ಬಾಳೆ ಎಲೆಯ ಮೇಲೆ ಎಣ್ಣೆ ಸವರಿ, ವಡೆ ಒತ್ತಿ. ಎಣ್ಣೆಯಲ್ಲಿ ಹೊಂಬಣ್ಣಕ್ಕೆ ತಿರುಗುವವರೆಗೆ ಕರಿದು ತೆಗೆಯಿರಿ. ಈಗ ರುಚಿಯಾದ ರವೆ ವಡೆ ಸವಿಯಲು ಸಿದ್ಧವಾಗಿದೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1426014387496697859?s=19
https://twitter.com/SaakshaTv/status/1425999111560601609?s=19
https://twitter.com/SaakshaTv/status/1425635748804538371?s=19
https://twitter.com/SaakshaTv/status/1425616146695397377?s=19
#Saakshatv #cookingrecipe #ravevade








