ಕಾಳು ಮೆಣಸು ಸಾರು (ಬಾಣಂತಿ ಸಾರು)
ಬೇಕಾಗುವ ಸಾಮಗ್ರಿಗಳು
ಧನಿಯಾ ಕಾಳು – 1ಚಮಚ
ಕಾಳು ಮೆಣಸು – 2 ಚಮಚ
ಜೀರಿಗೆ – 1/4 ಟೀ ಚಮಚ
ಓಂ ಕಾಳು – 1/4 ಚಮಚ
ಒಣ ಮೆಣಸಿನಕಾಯಿ ( ಬ್ಯಾಡಗಿ ಮೆಣಸು) – 10
ಬೆಳ್ಳುಳ್ಳಿ – 1 ಗಡ್ಡೆ
ಈರುಳ್ಳಿ – 1/4 ಭಾಗ
ಹುಣಸೆ ಹುಳಿ – ಸ್ವಲ್ಪ

ಮಾಡುವ ವಿಧಾನ
ಮೊದಲಿಗೆ ಹುಣಸೆ ಹುಳಿಯನ್ನು ಬಿಸಿನೀರಿನಲ್ಲಿ ನೆನೆಸಿಡಿ.
ನಂತರ ಎಲ್ಲಾ ಮಸಾಲಾ ಪದಾರ್ಥಗಳನ್ನು ಎಣ್ಣೆ ಹಾಕದೆ ಮಂದ ಉರಿಯಲ್ಲಿ ಚೆನ್ನಾಗಿ ಹುರಿಯಿರಿ. ನಂತರ ಈರುಳ್ಳಿ ಮತ್ತು ಬೆಳ್ಳುಳ್ಳಿಗಳನ್ನು ಪ್ರತ್ಯೇಕವಾಗಿ ಎಣ್ಣೆ ಹಾಕದೆ ಕೆಂಪಗೆ ಆಗುವವರೆಗೆ ಹುರಿಯಿರಿ. ಎಲ್ಲಾ ಮಸಾಲೆ ಪದಾರ್ಥಗಳು ತಣ್ಣಗಾದ ಮೇಲೆ ಮಿಕ್ಸಿ ಜಾರಿಗೆ ಹಾಕಿ ನುಣ್ಣಗೆ ರುಬ್ಬಿ.ಅದಕ್ಕೆ 2 ಚಮಚ ಕೊಬ್ಬರಿ ತುರಿಯನ್ನು ಸೇರಿಸಿ ಪುನಃ ರುಬ್ಬಿ. ನಂತರ ನೆನೆಸಿದ ಹುಣಸೆ ಹುಳಿಯನ್ನು ಚೆನ್ನಾಗಿ ಕಿವುಚಿ ರಸ ತೆಗೆದು ರುಬ್ಬಿದ ಮಿಶ್ರಣಕ್ಕೆ ಬೆರೆಸಿ. ಬಳಿಕ ಚೆನ್ನಾಗಿ ಕುದಿಸಿ. ನಂತರ ಅದಕ್ಕೆ ತುಪ್ಪದಲ್ಲಿ, ಸಾಸಿವೆ, ಕರಿಬೇವು, ಒಣಮೆಣಸಿನ ಒಗ್ಗರಣೆ ಕೊಡಿ. ಈಗ ಆರೋಗ್ಯಕರ ಕಾಳು ಮೆಣಸು ಸಾರು ರೆಡಿಯಾಗಿದೆ. ಇದು ಜ್ವರ, ಶೀತ, ಕೆಮ್ಮು, ಮೈ ನೋವು ಇವುಗಳಿಂದ ದೂರವಿರಲು ನೆರವಾಗುತ್ತದೆ.

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ… ನಮ್ಮ ಮತ್ತು ನಮ್ಮ ಕುಟುಂಬದ ಆರೋಗ್ಯ ನಮ್ಮ ಕೈಯಲ್ಲಿದೆ. ಇದು ಸಾಕ್ಷಾಟಿವಿ ಕಳಕಳಿ
https://twitter.com/SaakshaTv/status/1390506933489180675?s=19
https://twitter.com/SaakshaTv/status/1390494846192922625?s=19
https://twitter.com/SaakshaTv/status/1390144596563435521?s=19
https://twitter.com/SaakshaTv/status/1390132456125128706?s=19
#Saakshatv #cookingrecipe #kaalumenasu








