ತೊಂಡೆಕಾಯಿ ಮಂಚೂರಿ
ಬೇಕಾಗುವ ಸಾಮಗ್ರಿಗಳು
ತೊಂಡೆಕಾಯಿ – 20
ಈರುಳ್ಳಿ – 1
ಕ್ಯಾಪ್ಸಿಕಂ – 1
ಬೆಳ್ಳುಳ್ಳಿ – 10
ಮೈದಾ ಹಿಟ್ಟು – 1 ಕಪ್
ಕಾರ್ನ್ ಫ್ಲೋರ್ – 1/2 ಕಪ್
ಮೆಣಸಿನ ಪುಡಿ – 1/2 ಚಮಚ
ಅರಿಶಿನ ಪುಡಿ – 1/4 ಚಮಚ
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಚಮಚ
ಸೋಯಾ ಸಾಸ್ – 1 ಚಮಚ
ಚಿಲ್ಲಿ ಸಾಸ್ – 1 ಚಮಚ
ಟೊಮೇಟೊ ಕೆಚಪ್ – 1 ಚಮಚ
ವಿನಗರ್ – 1 ಚಮಚ
ಕೊತ್ತಂಬರಿ ಸೊಪ್ಪು – ಸ್ವಲ್ಪ
ರುಚಿಗೆ ತಕ್ಕಷ್ಟು ಉಪ್ಪು
ಕರಿಯಲು ಎಣ್ಣೆ
ಮಾಡುವ ವಿಧಾನ
ಮೊದಲಿಗೆ ತೊಂಡೆಕಾಯಿಗಳನ್ನು ಒಂದು ಇಂಚು ತುಂಡುಗಳಾಗಿ ಕತ್ತರಿಸಿಕೊಳ್ಳಿ. ನಂತರ ಒಂದು ಬೌಲ್ ನಲ್ಲಿ ಕಾರ್ನ್ಫ್ಲೋರ್, ಮೈದಾ, ಮೆಣಸಿನ ಪುಡಿ, ಅರಿಶಿನ, ಉಪ್ಪು, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಸೇರಿಸಿ. ಅಗತ್ಯವಿರುವಷ್ಟು ನೀರು ಸೇರಿಸಿ ಚೆನ್ನಾಗಿ ಕಲಸಿ. ನಂತರ ಅದಕ್ಕೆ ಕತ್ತರಿಸಿ ಇಟ್ಟುಕೊಂಡ ತೊಂಡೆಕಾಯಿ ತುಂಡುಗಳನ್ನು ಸೇರಿಸಿ ಚೆನ್ನಾಗಿ ಬೆರೆಸಿ. ನಂತರ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಇದರಲ್ಲಿ ತೊಂಡೆಕಾಯಿಗಳನ್ನು ಕರಿದು ಪಕ್ಕದಲ್ಲಿ ಇಟ್ಟುಕೊಳ್ಳಿ.
ನಂತರ ಬಾಣಲೆಯಲ್ಲಿ ಅರ್ಧ ಸೌಟು ಎಣ್ಣೆ ಹಾಕಿ ಕಾದಮೇಲೆ ಅದರಲ್ಲಿ ಜಜ್ಜಿದ ಬೆಳ್ಳುಳ್ಳಿ, ಸಣ್ಣಗೆ ಹೆಚ್ಚಿದ ಈರುಳ್ಳಿ, ತೆಳ್ಳಗೆ ಉದ್ದವಾಗಿ ಹೆಚ್ಚಿದ ಕ್ಯಾಪ್ಸಿಕಂ ಹಾಕಿ ಚೆನ್ನಾಗಿ ಹುರಿಯಿರಿ. ಬಳಿಕ ಇದಕ್ಕೆ ಚಿಲ್ಲಿ ಸಾಸ್, ಸೋಯಾ ಸಾಸ್, ವಿನಿಗರ್, ಟೊಮೇಟೊ ಕೆಚಪ್ ಸೇರಿಸಿ ಚೆನ್ನಾಗಿ ಕಲಸಿ. ನಂತರ ಕರಿದಿಟ್ಟುಕೊಂಡ ತೊಂಡೆಕಾಯಿಗಳನ್ನು ಸೇರಿಸಿ ಎಲ್ಲವನ್ನೂ ಚೆನ್ನಾಗಿ ಬೆರೆಸಿ. ಚಿಕ್ಕದಾಗಿ ಕತ್ತರಿಸಿದ ಈರುಳ್ಳಿ, ಕೊತ್ತಂಬರಿ ಸೊಪ್ಪನ್ನು ಉದುರಿಸಿ ಅಲಂಕರಿಸಿ. ಬಿಸಿಯಾಗಿರುವಾಗಲೇ ಸವಿಯಿರಿ.
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1413657361852534784?s=19
ಬದನೆ ಪಲಾವ್#Saakshatv #cookingrecipe #brinjalpulav https://t.co/B64w6eBD5Z
— Saaksha TV (@SaakshaTv) July 10, 2021
https://twitter.com/SaakshaTv/status/1413687593640808452?s=19
https://twitter.com/SaakshaTv/status/1413352894741504005?s=19
#Saakshatv #cookingrecipe #thondekayiManchurian