ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದೇ?

1 min read
Saakshatv health tips drinking tea on empty stomach

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದೇ?

ಬಹಳಷ್ಟು ಜನ ಚಹಾ ಕುಡಿಯಲು ಇಷ್ಟಪಡುತ್ತಾರೆ. ಬಹಳಷ್ಟು ಜನರಿಗೆ ಚಹಾ ಇಲ್ಲದಿದ್ರೆ ತಲೆನೋವು ಕಾಣಿಸಿಕೊಳ್ಳುತ್ತದೆ. ಚಹಾ ಕುಡಿಯುವುದರಿಂದ ಯಾವುದೇ ಹಾನಿ ಇಲ್ಲ, ಆದರೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅನೇಕ ಸಮಸ್ಯೆಗಳು ಉಂಟಾಗುತ್ತವೆ.

ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ, ಅದರಲ್ಲಿ ಕರಗಿರುವ ಸಕ್ಕರೆ ತೂಕ ಹೆಚ್ಚಳ ಮತ್ತು ಬೊಜ್ಜು ಉಂಟಾಗಲು ಕಾರಣವಾಗುತ್ತದೆ.
Saakshatv health tips drinking tea on empty stomach
ಚಹಾದ ಸೇವನೆಯು ಮೂಳೆಗಳಲ್ಲಿ ನೋವು ಮತ್ತು ಹಲ್ಲುಗಳ ಹಳದಿ ಬಣ್ಣಕ್ಕೆ ತಿರುಗಲು ಕಾರಣವಾಗುತ್ತದೆ.

ಚಹಾವು ಬಹಳಷ್ಟು ಕೆಫೀನ್ ಅನ್ನು ಹೊಂದಿದ್ದು ಅದು ಮೆದುಳನ್ನು ಉತ್ತೇಜಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ಹೆಚ್ಚು ಚಹಾ ಕುಡಿಯುವುದರಿಂದ ಒತ್ತಡ ಮತ್ತು ಖಿನ್ನತೆಯಂತಹ ಸಮಸ್ಯೆಗಳು ಉಂಟಾಗಬಹುದು.
ಅನೇಕ ಜನರು ಹೆಚ್ಚು ಸ್ಟ್ರಾಂಗ್ ಚಹಾವನ್ನು ಕುಡಿಯಲು ಇಷ್ಟಪಡುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅದನ್ನು ಕುಡಿಯುವುದರಿಂದ ಹೊಟ್ಟೆಯ ಒಳ ಮೇಲ್ಮೈಯಲ್ಲಿ ಗಾಯಗಳು ಉಂಟಾಗುತ್ತವೆ. ಇದು ಕ್ರಮೇಣ ಹೊಟ್ಟೆಯಲ್ಲಿ ಹುಣ್ಣುಗಳ ಸಮಸ್ಯೆಗೆ ಕಾರಣವಾಗುತ್ತದೆ.

ಅನೇಕರು ಬೆಳಿಗ್ಗೆ ಖಾಲಿ ಹೊಟ್ಟೆಗೆ ಚಹಾವನ್ನು ಮಾತ್ರ ಕುಡಿಯುತ್ತಾರೆ ಮತ್ತು ಅದರೊಂದಿಗೆ ಏನನ್ನೂ ತಿನ್ನುವುದಿಲ್ಲ. ಇದರಿಂದಾಗಿ ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ ಮತ್ತು ಜೀರ್ಣ ಶಕ್ತಿ ಕೂಡ ಹಾಳಾಗುತ್ತದೆ.

ಚಹಾ ಕುಡಿಯುವುದರಿಂದ ಚುರುಕುತನ ಬರುತ್ತದೆ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಾಲು ಬೆರೆಸಿದ ಚಹಾ ಕುಡಿಯುವುದು ದಿನವಿಡೀ ಆಯಾಸವನ್ನುಂಟು ಮಾಡುತ್ತದೆ ಮತ್ತು ಕಿರಿಕಿರಿಯನ್ನು ಉಂಟುಮಾಡುತ್ತದೆ.

ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ಹೃದಯ ಬಡಿತ ಹೆಚ್ಚಾಗುತ್ತದೆ. ಈ ಕಾರಣದಿಂದಾಗಿ ಹೃದಯ ಕಾಯಿಲೆಯ ಸಾಧ್ಯತೆ ಹೆಚ್ಚು.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

 

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd