ನೀರಲ್ಲಿ ನೆನೆಸಿದ ಒಣದ್ರಾಕ್ಷಿಯ ಆರೋಗ್ಯ ಪ್ರಯೋಜನಗಳು

1 min read
Saakshatv healthtips raisins

ನೀರಲ್ಲಿ ನೆನೆಸಿದ ಒಣದ್ರಾಕ್ಷಿಯ ಆರೋಗ್ಯ ಪ್ರಯೋಜನಗಳು

ಪೋಷಕಾಂಶಗಳ ಉಗ್ರಾಣವಾಗಿರುವ ಒಣದ್ರಾಕ್ಷಿ ನೈಸರ್ಗಿಕ ಸಕ್ಕರೆ ಮತ್ತು ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಫೈಬರ್ ಗಳಿಂದ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳಿಂದ ಕೂಡಿದೆ.
ಒಣದ್ರಾಕ್ಷಿಯನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ, ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಇನ್ನಷ್ಟು ‌ಉತ್ತಮ.

ನೆನೆಸಿದ ಒಣದ್ರಾಕ್ಷಿ ಸೇವನೆಯ ಆರೋಗ್ಯ ಪ್ರಯೋಜನಗಳು

1. ಜೀರ್ಣಕ್ರಿಯೆಗೆ ಸಹಾಯಕಾರಿ : ಒಣದ್ರಾಕ್ಷಿಯಲ್ಲಿ ಫೈಬರ್ ಸಮೃದ್ಧವಾಗಿದೆ. ಇದು ಜೀರ್ಣಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ. ನೆನೆಸಿದ ಒಣದ್ರಾಕ್ಷಿ ಮಲಬದ್ಧತೆಯನ್ನು ತಡೆಯುತ್ತದೆ ಮತ್ತು ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ.
ಸುಮಾರು 1-12 ಒಣದ್ರಾಕ್ಷಿಗಳನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ನಂತರ ಒಣದ್ರಾಕ್ಷಿ ಜೊತೆಗೆ ಆ ನೀರನ್ನು ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.
Saakshatv healthtips raisins
2. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಒಣದ್ರಾಕ್ಷಿ ವಿಟಮಿನ್ ಸಿ ಮತ್ತು ಬಿ ಯಂತಹ ಎಲ್ಲಾ ಅಗತ್ಯ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಚಳಿಗಾಲದಲ್ಲಿ ಪ್ರತಿದಿನ ನೆನೆಸಿದ ಒಣದ್ರಾಕ್ಷಿ ಸೇವಿಸುವುದರಿಂದ ಬ್ಯಾಕ್ಟೀರಿಯಾ ಮತ್ತು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

3. ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ
ಒಣದ್ರಾಕ್ಷಿಯಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದೆ. ಇದು ಮೂಳೆಯ ಆರೋಗ್ಯಕ್ಕೂ ಒಳ್ಳೆಯದು . ನೆನೆಸಿದ ಒಣದ್ರಾಕ್ಷಿಯಲ್ಲಿನ ಪೋಷಕಾಂಶಗಳು ನಿಮ್ಮ ಮೂಳೆಯ ಆರೋಗ್ಯಕ್ಕೆ ಪ್ರಯೋಜನವನ್ನು ನೀಡುತ್ತದೆ. ಆಸ್ಟಿಯೊಪೊರೋಸಿಸ್ ಮತ್ತು ಕರುಳಿನ ಆಕ್ರಮಣವನ್ನು ತಡೆಯಲು ಸಹ ಇದು ಸಹಾಯ ಮಾಡುತ್ತದೆ.

4. ತೂಕ ನಷ್ಟವನ್ನು ಉತ್ತೇಜಿಸುತ್ತದೆ

ನೈಸರ್ಗಿಕ ಸಕ್ಕರೆಗಳಿಂದ ತುಂಬಿರುವ ನೆನೆಸಿದ ಒಣದ್ರಾಕ್ಷಿ ತೂಕ ನಷ್ಟವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹಸಿವನ್ನು ತಡೆಯುವ ಮೂಲಕ, ನೆನೆಸಿದ ಒಣದ್ರಾಕ್ಷಿ ಅನಾರೋಗ್ಯಕರ ತಿಂಡಿಗಳನ್ನು ತಿನ್ನುವುದನ್ನು ತಡೆಯುತ್ತದೆ. ಇದರಿಂದಾಗಿ ಅನಾರೋಗ್ಯಕರ ತೂಕ ಹೆಚ್ಚಾಗುವುದನ್ನು ತಡೆಯಬಹುದು

5. ರಕ್ತಹೀನತೆಯನ್ನು ತಡೆಯುತ್ತದೆ
ಒಣದ್ರಾಕ್ಷಿ ಕಬ್ಬಿಣದಿಂದ ಸಮೃದ್ಧವಾಗಿದೆ ಮತ್ತು ದೇಹದಲ್ಲಿ ರಕ್ತ ಪೂರೈಕೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆ ಮೂಲಕ ರಕ್ತಹೀನತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಪ್ರತಿದಿನ ನೆನೆಸಿದ ಒಣದ್ರಾಕ್ಷಿ ಸೇವಿಸುವುದರಿಂದ ದೇಹದಲ್ಲಿ ರಕ್ತದ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

6. ಯಕೃತ್ತು (ಲಿವರ್) ಅನ್ನು‌ ಆರೋಗ್ಯವಾಗಿರಿಸುತ್ತದೆ
ಒಣದ್ರಾಕ್ಷಿ ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುವ ಅತ್ಯುತ್ತಮ ಒಣ ಹಣ್ಣುಗಳಲ್ಲಿ ಒಂದು. ನೆನೆಸಿದ ಒಣದ್ರಾಕ್ಷಿಗಳನ್ನು ತಿನ್ನುವುದು, ವಿಶೇಷವಾಗಿ ಕಪ್ಪು ಒಣದ್ರಾಕ್ಷಿಯ‌ ಸೇವನೆ ಯಕೃತ್ತಿನ ಕಾರ್ಯಗಳನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ ಮತ್ತು ದೇಹದಿಂದ ವಿಷವನ್ನು ಹೊರಹಾಕುತ್ತದೆ.

7. ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ

ಒಣದ್ರಾಕ್ಷಿಗಳಲ್ಲಿರುವ ನೈಸರ್ಗಿಕ ಫ್ರಕ್ಟೋಸ್ ಮತ್ತು ಗ್ಲೂಕೋಸ್ ಹೆಚ್ಚಿನ ಪ್ರಮಾಣದ ಶಕ್ತಿಯನ್ನು ಒದಗಿಸಲು ಸಹಾಯ ಮಾಡುತ್ತದೆ. ನೆನೆಸಿದ ಒಣದ್ರಾಕ್ಷಿ ಮಿತವಾಗಿ ಸೇವಿಸಿದರೆ ದೌರ್ಬಲ್ಯ ಮತ್ತು ತೂಕ ಹೆಚ್ಚಾಗುವುದನ್ನು ತಡೆಯುತ್ತದೆ.

8. ಕೆಟ್ಟ ಉಸಿರನ್ನು ತಡೆಯುತ್ತದೆ

ಒಣದ್ರಾಕ್ಷಿ ಬಾಯಿಯ ಬ್ಯಾಕ್ಟೀರಿಯಾ ವಿರುದ್ಧ ಹೋರಾಡಲು ಮತ್ತು ಬಾಯಿಯ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದಾಗಿ ಬಾಯಿಯ ವಾಸನೆಯನ್ನು ತೊಡೆದುಹಾಕಬಹುದು.

9. ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ

ಒಣದ್ರಾಕ್ಷಿ ವಿಟಮಿನ್ ಎ ಮತ್ತು ಇ ಅನ್ನು ಹೊಂದಿರುತ್ತದೆ. ಇದು ಚರ್ಮದ ಹೊರ ಪದರಗಳಲ್ಲಿ ಹೊಸ ಕೋಶಗಳ ಬೆಳವಣಿಗೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ನೆನೆಸಿದ ಒಣದ್ರಾಕ್ಷಿಗಳನ್ನು ನಿಯಮಿತವಾಗಿ ಮತ್ತು ಮಿತವಾಗಿ ಸೇವಿಸುವುದರಿಂದ ಚರ್ಮದ ಜಲಸಂಚಯನವನ್ನು ಸುಧಾರಿಸಲು ಸಹಾಯ ಮಾಡುತ್ತದೆ, ಇದರಿಂದ ನಿಮ್ಮ ಚರ್ಮವು ಆರೋಗ್ಯಕರವಾಗಿ ಕಾಣುತ್ತದೆ. ನೆನೆಸಿದ ಒಣದ್ರಾಕ್ಷಿ ಸೂರ್ಯನ ಹಾನಿಯಿಂದ ಚರ್ಮವನ್ನು ರಕ್ಷಿಸಲು ಸಹಾಯ ಮಾಡುತ್ತದೆ.

10. ಕೂದಲಿನ ಆರೋಗ್ಯವನ್ನು ಸುಧಾರಿಸುತ್ತದೆ
ಒಣದ್ರಾಕ್ಷಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ಸಿ, ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇದನ್ನು ನಿಯಮಿತವಾಗಿ ಸೇವಿಸಿದಾಗ, ರಕ್ತನಾಳಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದರ ಪರಿಣಾಮವಾಗಿ ತಲೆಹೊಟ್ಟು, ತುರಿಕೆ, ಕೂದಲು ಉದುರುವಿಕೆ ಕಡಿಮೆಯಾಗಿ ಕೂದಲಿನ ಆರೋಗ್ಯ ಸುಧಾರಿಸುತ್ತದೆ.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

#Saakshatv #healthtips #healthbenefits #soakedraisins

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd