ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್(GAIL) – ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಜಿಎಐಎಲ್) ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.
220 ಇಂಜಿನಿಯರ್, ಅಧಿಕಾರಿ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 5ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಖಾಲಿ ಹುದ್ದೆಗಳ ವಿವರ:
ವ್ಯವಸ್ಥಾಪಕ – 10 ಹುದ್ದೆಗಳು
ಹಿರಿಯ ಇಂಜಿನಿಯರ್ – 122 ಹುದ್ದೆಗಳು
ಹಿರಿಯ ಅಧಿಕಾರಿ – 69 ಹುದ್ದೆಗಳು
ಅಧಿಕಾರಿ – 19 ಹುದ್ದೆಗಳು
ಒಟ್ಟು 220 ಹುದ್ದೆಗಳು
ಶೈಕ್ಷಣಿಕ ವಿದ್ಯಾಭ್ಯಾಸ :
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಸಿಎ/ಸಿಎಂಎ, ಬಿ.ಕಾಂ, ಬಿ.ಎ, ಬಿ.ಎಸ್ಸಿ, ಬಿ.ಇ/ಬಿ.ಟೆಕ್, ಎಂಬಿಎ, ಎಂಎಸ್‌ಡಬ್ಲ್ಯೂ, ಎಂಸಿಎ, ಸ್ನಾತಕೋತ್ತರ ಪದವಿ, ಪದವಿ, ಎಲ್‌ಎಲ್‌ಬಿ, ಎಲ್‌ಎಲ್‌ಎಂ, ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಟ 28 ರಿಂದ 45 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಕಾಯ್ದಿರಿಸಿದ ವರ್ಗಕ್ಕೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪಿಇಟಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.gailonline.com/?utm_source=DH-MoreFromPub&utm_medium=DH-app&utm_campaign=DH
ಗೆ ಭೇಟಿ ನೀಡಬೇಕು. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 5, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಗಮನಿಸಿ.
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1413657361852534784?s=19
https://twitter.com/SaakshaTv/status/1413715261249654786?s=19
https://twitter.com/SaakshaTv/status/1413687593640808452?s=19
ಪುದೀನಾ ರೊಟ್ಟಿ#Saakshatv #cookingrecipe #pudinarotti https://t.co/mcXVkPZeUD
— Saaksha TV (@SaakshaTv) July 9, 2021
Saakshatv jobs Gail (india) recruitment invited application for the posts