ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ- ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

1 min read
Saakshatv job KSP Recruitment

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ- ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.‌

402 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯು.ಜಿ.ಸಿ ಯಿಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿಯನ್ನು ಪಡೆದಿರಬೇಕು.
Saakshatv jobs Rdpr Karnataka recruitment

ಈ ಹುದ್ದೆಗಳಿಗೆ ಕನಿಷ್ಟ 21 ವರ್ಷದಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ‌ ಕಾಯ್ದಿರಿಸಿದ ವರ್ಗಕ್ಕೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇದೆ.

ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಪೊಲೀಸ್ ಸಬ್‌-ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in/index ಗೆ ಭೇಟಿ ನೀಡಿ, ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in/ ಗೆ ಭೇಟಿ ನೀಡಿ.

wearing masks

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ… ನಮ್ಮ ಮತ್ತು ನಮ್ಮ ‌ಕುಟುಂಬದ ಆರೋಗ್ಯ ನಮ್ಮ ‌ಕೈಯಲ್ಲಿದೆ. ಇದು ‌ಸಾಕ್ಷಾಟಿವಿ ಕಳಕಳಿ

#Saakshatvjobs #Karnatakasubinspector #recruitment

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd