ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ- ಗ್ರಂಥಾಲಯ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

1 min read
Saakshatv jobs Rajiv Gandhi University

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ- ಗ್ರಂಥಾಲಯ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಗ್ರಂಥಾಲಯ ಟ್ರೈನಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 27, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Saakshatv jobs Rajiv Gandhi University

ವಿದ್ಯಾರ್ಹತೆ:

ಗ್ರಂಥಾಲಯ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಂ.ಎಲ್.ಐ.ಎಸ್ಸಿ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ಸ್ಟೈಫೆಂಡ್:

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಗ್ರಂಥಾಲಯ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 15,000/-ರೂ ಸ್ಟೈಫೆಂಡ್ ಅನ್ನು ಪಡೆಯುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಏಪ್ರಿಲ್ 27,2021ರೊಳಗೆ
Saakshatv jobs Rajiv Gandhi University

ನಿರ್ದೇಶಕರು,
ಗ್ರಂಥಾಲಯ,
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ,
ಕರ್ನಾಟಕ,
4ನೇ ಟಿ.ಬ್ಲಾಕ್,
ಜಯನಗರ,
ಬೆಂಗಳೂರು-560 041

ಕಳುಹಿಸಬೇಕು. ಅರ್ಜಿಯ ಲಕೋಟೆಯ ಮೇಲೆ ‘ಗ್ರಂಥಾಲಯ ಟ್ರೈನಿ’ ಎಂದು ನಮೂದಿಸಿರಬೇಕು ಅಥವಾ ಸ್ವ-ವಿವರಗಳನ್ನು ಇಮೇಲ್ ಮೂಲಕ ಕೂಡ [email protected] ಗೆ ಕಳುಹಿಸಬಹುದು .

ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಬಹುದಾಗಿದೆ.

#Saakshatvjobs #RajivGandhiUniversity

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd