ADVERTISEMENT
Friday, October 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಕಲಚೇತನರ ಹಣಕ್ಕೆ ಕೈ ಹಾಕಿದ ಕಾಂಗ್ರೆಸ್‌ ಸರ್ಕಾರ, ವೇತನ ಹೆಚ್ಚಳ ಮಾಡಬೇಕು, ಪಿಂಚಣಿ ನೀಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

admin by admin
October 16, 2026
in Newsbeat, State, ರಾಜ್ಯ
saakshatv-r-ashoka-congress-government-disability-pension-salary-hike-demand

saakshatv-r-ashoka-congress-government-disability-pension-salary-hike-demand

Share on FacebookShare on TwitterShare on WhatsappShare on Telegram

ರಾಮನಗರ, ಗ್ಯಾರಂಟಿಗಳಿಗಾಗಿ ಎಲ್ಲ ಸೌಲಭ್ಯಗಳನ್ನು ಕಡಿತ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಈಗ ಅಂಗವಿಕಲರ ಪಿಂಚಣಿ ಹಣಕ್ಕೂ ಕೈ ಹಾಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ವಿಕಲಚೇತನರು ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಣ್ಣು, ಕೈ ಕಾಲು ಇಲ್ಲದ ಅಂಗವಿಕಲರು ಬೀದಿಗಿಳಿದು ಹೋರಾಟ ಮಾಡುತ್ತಾರೆ ಎಂದರೆ ಅದು ಶೋಚನೀಯ. ಒಂದು ತಿಂಗಳಿಂದ ಅಂಗವಿಕಲರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಕನಿಷ್ಠ ವೇತನವೇ 18,000 ರೂ. ಇರುವಾಗ, ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಅಂಗವಿಕಲಕರಿಗ 10,000 ರೂ. ಮಾತ್ರ ನೀಡಲಾಗುತ್ತಿದೆ. ಐದು ತಿಂಗಳಿಂದ ಇವರ ಪಿಂಚಣಿ ಕೂಡ ನೀಡುತ್ತಿಲ್ಲ. ಅಂಗವಿಕಲರಿಗೆ ಆರೋಗ್ಯ ಸಮಸ್ಯೆ ಕೂಡ ಇದ್ದು, ಅದಕ್ಕಾಗಿ ಪಿಂಚಣಿ ನೀಡಲಾಗುತ್ತಿದೆ. ಈಗ ಊಟಕ್ಕೆ, ಚಿಕಿತ್ಸೆಗೆ ಅವರೇನು ಮಾಡಬೇಕು? ಪರಿಷ್ಕರಣೆ ಮಾಡಲು ಪಿಂಚಣಿ ನೀಡುವುದನ್ನು ನಿಲ್ಲಿಸುವ ಅಗತ್ಯವಿಲ್ಲ ಎಂದರು.

Related posts

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

October 16, 2026
saakshatv-instamart-qim-sale-2026-beauty-products-festival-discounts

ಇನ್‌ಸ್ಟಾಮಾರ್ಟ್ QIM ಸೇಲ್ 2026: ಹಬ್ಬದ ಸೀಸನ್‌ಗೆ ಬ್ಯೂಟಿ ಪ್ರಾಡಕ್ಟ್‌ಗಳ ಮೇಲೆ ಬಂಪರ್‌ ರಿಯಾಯಿತಿ

October 16, 2026

ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಾಗಿ ಎಲ್ಲವನ್ನೂ ಸ್ಥಗಿತಗೊಳಿಸಿ ಭಿಕ್ಷುಕನಂತೆ ಆಗಿದೆ. ಈಗ ಅಂಗವಿಕಲರ ಹಣಕ್ಕೂ ಕೈ ಹಾಕಲಾಗಿದೆ. ಕಳೆದ ಐದು ತಿಂಗಳ ಪಿಂಚಣಿಯನ್ನು ಈ ಸರ್ಕಾರ ತಿಂದುಹಾಕಿದೆ. ಸಚಿವರು ಬಂದು ಭೇಟಿ ಮಾಡಿ ಭರವಸೆ ನೀಡುವವರೆಗೂ ಅವರ ಹೋರಾಟದೊಂದಿಗೆ ನಾವು ಕೈ ಜೋಡಿಸುತ್ತೇವೆ. ಅವರ ಕಣ್ಣೀರಿನಿಂದ ಸರ್ಕಾರಕ್ಕೆ ಶಾಪ ತಟ್ಟಲಿದೆ ಎಂದರು.

ರಾಜ್ಯದಲ್ಲಿ ಕಿತ್ತು ತಿನ್ನುವ ಬರಗಾಲವಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ನಿಗಮಗಳಿಗೆ ಹಣ ಲಭ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ಸ್ಟಿಂಗ್‌ ಆಪರೇಶನ್‌ ಬಗ್ಗೆ ಚರ್ಚೆ ನಡೆಯುತ್ತಿದೆ. ಮೊದಲೇ ಸಿದ್ದರಾಮಯ್ಯ ಸಂಕಷ್ಟದಲ್ಲಿದ್ದು ಅವರಿಗೆ ಇನ್ನಷ್ಟು ನೋವು ನೀಡಲಾಗುತ್ತಿದೆ. ಹೀಗೆಯೇ ಎಷ್ಟು ದಿನ ಗಾಳಿಯಲ್ಲಿ ಗುಂಡು ಹೊಡೆಯುತ್ತಾರೆ? ಸಿಎಂ ಡಿ.ಕೆ.ಶಿವಕುಮಾರ್‌ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಾತಾಡಿದ್ದಾರೆ. ಅಂದಮೇಲೆ ಗೃಹಸಚಿವರು ಈ ಕುರಿತು ಎಫ್‌ಐಆರ್‌ ದಾಖಲಿಸಿ ತನಿಖೆ ಮಾಡಿಸಬೇಕಿತ್ತು. ಮಾಜಿ ಸಿಎಂ ಸಿದ್ದರಾಮಯ್ಯ ಕೊಟ್ಟ ದೂರಿನಲ್ಲಿ ಏನೂ ಇಲ್ಲ. ಇದನ್ನು ಯಾರು ಮಾಡಿದರು ಎಂಬ ಅಂಶವೇ ಇಲ್ಲ. ವಿತರಣೆ ಮಾಡಿದವರ ವಿರುದ್ಧ ಮಾತ್ರ ದೂರು ನೀಡಲಾಗಿದೆ ಎಂದರು.

ಈ ಸ್ಟಿಂಗ್‌ ಆಪರೇಶನ್‌ ನಡೆಸಲು 10-15 ಕೋಟಿ ರೂ. ಖರ್ಚಾಗಿದೆ. ಈ ಕಪ್ಪು ಹಣ ಎಲ್ಲಿಂದ ಬಂದಿದೆ? ಯಾರ ಹಣವನ್ನು ಲೂಟಿ ಮಾಡಲಾಗಿದೆ? ಈ ಎಲ್ಲ ವಿಷಯಗಳು ಬಹಿರಂಗವಾಗಲು ತನಿಖೆ ನಡೆಯಬೇಕು. ಇದು ರಾಜಕೀಯ ವ್ಯಭಿಚಾರವಾಗಿದ್ದು, ತನಿಖೆಯಿಂದ ಎಲ್ಲ ಸತ್ಯ ಹೊರಗೆ ಬರಬೇಕು. ಇಲ್ಲವಾದರೆ ಮಾಜಿ ಮುಖ್ಯಮಂತ್ರಿಗಳಾದ ಕೆಂಗಲ್‌ ಹನುಮಂತಯ್ಯ, ಎಸ್‌.ನಿಜಲಿಂಗಪ್ಪ, ವೀರೇಂದ್ರ ಪಾಟೀಲ್‌ ಮೊದಲಾದವರಿಗೆ ಅಪಮಾನ ಮಾಡಿದಂತಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳು ಹುಳ ಬಿಟ್ಟಿದ್ದರು. ಅವರ ಬಳಿಯೇ ಗುಪ್ತಚರ ವಿಭಾಗವಿದೆ. ಆದ್ದರಿಂದ ಆ ಬಗ್ಗೆ ಕಾಯದೆ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

ಬರಗಾಲದ ವಿಷಯದ ಬಗ್ಗೆ ಚರ್ಚೆ ಮಾಡಿದರೂ ನಾವು ಚರ್ಚೆಯೇ ಮಾಡಿಲ್ಲ ಎಂದು ಕಾಂಗ್ರೆಸ್‌ನವರು ಹೇಳಿದ್ದರು. ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿದರೆ ಬರಗಾಲದ ಬಗ್ಗೆ ಚರ್ಚೆ ಮಾಡಿ ಎಂದರು. ಬರಗಾಲದ ಬಗ್ಗೆ ಚರ್ಚೆ ಮಾಡಲು ನಾವು ಮುಂದಾದರೆ, ಸ್ಟಿಂಗ್‌ ಆಪರೇಶನ್‌ ಬಗ್ಗೆ ಹೇಳುತ್ತಿದ್ದಾರೆ. ಬರಗಾಲಕ್ಕೆ ಪರಿಹಾರ ನೀಡಲು ಯೋಗ್ಯತೆ ಇಲ್ಲದ ಈ ದಿವಾಳಿ ಸರ್ಕಾರ, ವಿಷಯಾಂತರ ಮಾಡಲು ಸ್ಟಿಂಗ್‌ ಆಪರೇಶನ್‌ ಬಗ್ಗೆ ಮಾತಾಡುತ್ತಿದೆ. ಕಾಂಗ್ರೆಸ್‌ ಪಕ್ಷದಲ್ಲೇ ಒಗ್ಗಟ್ಟಿಲ್ಲ. ಈ ವಿಚಾರದಲ್ಲಿ ಕೆಲವರು ಸಿದ್ದರಾಮಯ್ಯನವರ ಪರ, ವಿರೋಧ ಇದ್ದಾರೆ. ಕೆಲವರು ತಟಸ್ಥರಾಗಿದ್ದಾರೆ. ಮಾಡಿಸಿದವರು ಯಾರೆಂಬ ಸತ್ಯ ಹೊರಗೆ ಬಂದರೆ ಕೋಲಾಹಲವಾಗಿ ಕಾಂಗ್ರೆಸ್‌ ಪಕ್ಷದ ಮೇಲೆ ಜನರ ನಂಬಿಕೆ ಹೊರಟುಹೋಗುತ್ತದೆ. ಜನರು ಇಡೀ ಪಕ್ಷವನ್ನು ಓಡಿಸಿಬಿಡುತ್ತಾರೆ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ಈಗ ರಾಜಕೀಯದ ಸಂಧ್ಯಾಕಾಲದಲ್ಲಿದ್ದಾರೆ. ಅವರಿಗೆ ಇಂತಹ ಸ್ಥಿತಿ ಬರಬಾರದಿತ್ತು. ರಾಜಕೀಯವಾಗಿ ಫೈಟ್‌ ಮಾಡಬೇಕೆ ಹೊರತು, ಈ ರೀತಿ ಮಾಡಬಾರದು ಎಂದರು.

ShareTweetSendShare
Join us on:

Related Posts

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

by admin
October 16, 2026
0

​ ಬೆಂಗಳೂರು : ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಸಂಚಲನ ಮೂಡಿಸಿರುವ ‘ಪ್ರೇಮದ ಊರಲಿ’ ಚಿತ್ರದ ಅಭೂತಪೂರ್ವ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಯಾಂಡಲ್‌ವುಡ್ ಬಾಕ್ಸ್ ಆಫೀಸ್‌ನಲ್ಲಿ...

saakshatv-instamart-qim-sale-2026-beauty-products-festival-discounts

ಇನ್‌ಸ್ಟಾಮಾರ್ಟ್ QIM ಸೇಲ್ 2026: ಹಬ್ಬದ ಸೀಸನ್‌ಗೆ ಬ್ಯೂಟಿ ಪ್ರಾಡಕ್ಟ್‌ಗಳ ಮೇಲೆ ಬಂಪರ್‌ ರಿಯಾಯಿತಿ

by admin
October 16, 2026
0

ಬೆಂಗಳೂರು: ದಸರಾ ಸಂಭ್ರಮ, ದೀಪಾವಳಿ ಪಾರ್ಟಿ, ಹಬ್ಬದ ಭೋಜನ ಹಾಗೂ ಸಂಭ್ರಮಕ್ಕೆ ತಯಾರಾಗಲು ಇನ್‌ಸ್ಟಾಮಾರ್ಟ್ ತನ್ನ 'ಕ್ವಿಕ್ ಇಂಡಿಯಾ ಮೂವ್ಮೆಂಟ್' (ಕ್ಯೂಐಎಂ) ಸೇಲ್ 2026 ಅನ್ನು ಆರಂಭಿಸಿದೆ....

ಜಿಯೋ ಐಪಿಒ ಬಗ್ಗೆ ವಿಶ್ಲೇಷಕರು ಪಾಸಿಟಿವ್; ಲಿಸ್ಟಿಂಗ್‌ನಲ್ಲಿ ಶೇ 15-20ರಷ್ಟು ಲಾಭದ ನಿರೀಕ್ಷೆ

by admin
October 16, 2026
0

ಮುಂಬೈ,: ಜಿಯೋ ಪ್ಲಾಟ್‌ಫಾರ್ಮ್ಸ್‌ನ ಪ್ರೈಸ್ ಬ್ಯಾಂಡ್ (ಬೆಲೆ ಶ್ರೇಣಿ) ಪ್ರಕಟವಾದ ನಂತರ ವಿಶ್ಲೇಷಕರ ಅಭಿಪ್ರಾಯಗಳು ಬಹುತೇಕ ಉತ್ಸಾಹದಿಂದ ಕೂಡಿದೆ. ಹಲವು ವರದಿಗಳು ಐಪಿಒಗೆ ಧನಾತ್ಮಕ ಮೌಲ್ಯಮಾಪನ ನೀಡಿವೆ....

saakshatv-bengaluru-vancouver-airports-sister-airport-agreement-direct-flights

ಕೆನಡಾದ ವ್ಯಾಂಕೋವರ್ – ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ, ನೇರ ವಿಮಾನ ಸೇವೆಗೆ ಭದ್ರ ಬುನಾದಿ!

by admin
October 16, 2026
0

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಬಿಎಲ್‌ಆರ್‌) ಮತ್ತು ಕೆನಡಾದ ವ್ಯಾಂಕೋವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ವೈವಿಆರ್‌) ನಡುವೆ ಐತಿಹಾಸಿಕ 'ಸಿಸ್ಟರ್ ಏರ್‌ಪೋರ್ಟ್' ಒಪ್ಪಂದಕ್ಕೆ ಸಹಿ ಹಾಕಲಾಗಿದೆ....

saakshatv-bgmi-air-krafton-india-1-crore-pre-registrations

‘BGMI Air’ ಆಗಿ ಬದಲಾದ ‘BGMI Lite’: ಬಿಡುಗಡೆಗೂ ಮುನ್ನವೇ 1 ಕೋಟಿಗೂ ಅಧಿಕ ಪ್ರಿ-ರಿಜಿಸ್ಟ್ರೇಷನ್ ದಾಖಲೆ!

by admin
October 16, 2026
0

ಬೆಂಗಳೂರು: ಪ್ರಸಿದ್ಧ ಗೇಮಿಂಗ್ ಕಂಪನಿ ಕ್ರಾಫ್ಟನ್ ಇಂಡಿಯಾ ತನ್ನ ಮುಂಬರುವ ಮೊಬೈಲ್ ಗೇಮ್ 'ಬಿಜಿಎಂಐ ಲೈಟ್' ಹೆಸರನ್ನು 'ಬಿಜಿಎಂಐ ಏರ್' ಎಂದು ಅಧಿಕೃತವಾಗಿ ಬದಲಾಯಿಸಿದೆ. ಭಾರತದಲ್ಲಿ ಈ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram