ಜು.17 ರಿಂದ ಶಬರಿಮಲೆ ಅಯ್ಯಪ್ಪ ದೇವಾಲಯ ಓಪನ್
ತಿರುವನಂತಪುರ : ಕೊರೊನಾ ಕಾರಣದಿಂದಾಗಿ ಮುಚ್ಚಲಾಗಿದ್ದ ಶಬರಿಮಲೆ ಅಯ್ಯಪ್ಪ ದೇವಸ್ಥಾನ ಇದೇ 17 ರಂದು ತೆರೆದುಕೊಳ್ಳಲಿದೆ.
ಮಾಸಪೂಜೆಗಾಗಿ ಐದು ದಿನಗಳವರೆಗೆ ದೇವಾಲಯವನ್ನು ತೆರೆಯಲಾಗುತ್ತಿದ್ದು, ಕೆಲವೊಂದು ಷರತ್ತುಗಳನ್ನು ವಿಧಿಸಲಾಗಿದೆ.
ಇದೇ 17ರ ಶನಿವಾರದಿಂದ 21ರ ವರೆಗೆ ದೇವಾಲಯ ತೆರೆಯಲಾಗುತ್ತಿದ್ದು ಭಕ್ತರು ಅಯ್ಯಪ್ಪನ ದರ್ಶನ ಪಡೆಯಬಹುದಾಗಿದೆ ಎಂದು ತಿರುವಾಂಕುರ್ ದೇವಸ್ವಂ ಮಂಡಳಿ ತಿಳಿಸಿದೆ.
ಮಾರ್ಗಸೂಚಿಗಳೇನು..?
ಕೊರೊನಾ ಲಸಿಕೆ ಪಡೆದ ಪ್ರಮಾಣ ಪತ್ರ ಅಥವಾ 48 ಗಂಟೆಗಳೊಳಗೆ ಕೋವಿಡ್ ಟೆಸ್ಟ್ ಮಾಡಿಸಿದ, ಆರ್‍ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ.
ಆನ್ ಲೈನ್ ಮೂಲಕ ಬುಕಿಂಗ್ ಮಾಡಿಕೊಂಡ ಗರಿಷ್ಠ 5 ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ
ನೋಂದಣಿ ಮಾಡಿಸಲು ಮೊಬೈಲ್ ನಂಬರ್, ಇ-ಮೇಲ್ ಐಡಿ ಕಡ್ಡಾಯ
ಮಾಸ್ಕ್ ಸೇರಿದಂತೆ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು