ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“ಆ ಪಂದ್ಯದಲ್ಲಿ ಸಚಿನ್ 190 ರನ್ ಗೆ ಎಲ್‌ಬಿ ಆಗಿದ್ರೂ ಪ್ರೇಕ್ಷಕರ ಭಯದಿಂದ ಅಂಪೈರ್ ಔಟ್ ನೀಡಿರಲಿಲ್ಲ”

admin by admin
May 19, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

2010ರ ಫೆ. 24 ಇದು ವಿಶ್ವ ಕ್ರಿಕೆಟ್, ಕ್ರಿಕೆಟ್ ಅಭಿಮಾನಿಗಳು ಎಂದೂ ಮರೆಯಲಾಗದ ದಿನ. ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿದ ದಿನವೂ ಹೌದು. ಅಂದು ವಿಶ್ವ ಕ್ರಿಕೆಟ್ ಇತಿಹಾಸದಲ್ಲಿ ಯಾರು ಮಾಡದ ಸಾಧನೆಯನ್ನ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಸಾಧಿಸಿ ದಾಖಲೆ ನಿರ್ಮಿಸಿದ್ದರು.

Related posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026
guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

July 28, 2026

ಹೌದು..! ಅದು ಗ್ವಾಲಿಯರ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ-ಭಾರತ ನಡುವಿನ ಏಕದಿನ ಪಂದ್ಯ. ಈ ಮ್ಯಾಚ್ ನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ದ್ವಿಶತಕ ಹೊಡೆಯುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದರು. ಅಂದು ಸಚಿನ್ 190ರ ಗಡಿಯಲ್ಲಿ ಒಂದೊಂದು ರನ್ ಗಳಿಸುತ್ತಿದ್ದರೇ ಗ್ವಾಲಿಯರ್ ಅಂಗಳ ಸಚಿನ್ ಮಯವಾಗಿತ್ತು. ಪ್ರೇಕ್ಷಕರು ಸಚಿನ್..ಸಚಿನ್ ಎಂದು ಕೂಗುತ್ತಾ ಕುಣಿಯುತ್ತಿದ್ದರು. ಟಿ.ವಿಯಲ್ಲಿ ಪಂದ್ಯ ನೋಡುತ್ತಿದ್ದವರು ಆ ಕ್ಷಣಕ್ಕಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದರು. ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳ ಕೋರಿಕೆಯಂತೆ ಅಂದು ಕ್ರಿಕೆಟ್ ದೇವರು ಕೊನೆಯ ಓವರ್ ನ 2ನೇ ಎಸೆತದಲ್ಲಿ ಸಿಂಗಲ್ ತೆಗೆಯುವ ಮೂಲಕ ದ್ವಿಶತಕ ಬಾರಿಸಿ ಇತಿಹಾಸ ನಿರ್ಮಿಸಿದ್ದರು. ಸಚಿನ್ ಡಬಲ್ ಸೆಂಚುರಿ ಬಾರಿಸುತ್ತಿದ್ದಂತೆ ಭಾರತೀಯರೆಲ್ಲರೂ ಕುಣಿದು ಕುಪ್ಪಳಿಸಿದ್ದರು.

ಆದ್ರೆ ಈ ಪಂದ್ಯದಲ್ಲಿ ಸಚಿನ್ 190 ರನ್ ಗಳಿಸಿದ್ದಾಗ ಔಟಾಗಿದ್ದರೂ ಅಂಪೈರ್ ಔಟ್ ನೀಡಲಿಲ್ಲ. ಅಂಪೈರ್ ಔಟ್ ನೀಡದ್ದಕ್ಕೆ ಕಾರಣ ಪ್ರೇಕ್ಷಕರು ಎಂದು ಆಫ್ರಿಕಾದ ವೇಗಿ ಡೇಲ್ ಸ್ಟೇನ್ ಹೇಳಿದ್ದಾರೆ.

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಆಟಗಾರು ಕ್ರೀಡಾ ವಾಹಿನಿಗಳ ಜೊತೆ ಮಾತನಾಡಿ ಹಳೆಯ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅದೇ ರೀತಿಯಾಗಿ ಸ್ಕೈ ಸ್ಪೋರ್ಟ್ಸ್ ಕ್ರಿಕೆಟ್ ಕಾರ್ಯಕ್ರಮದಲ್ಲಿ ಜೇಮ್ಸ್ ಆಂಡರ್ಸನ್ ಅವರ ಜೊತೆ ಮಾತನಾಡಿದ ಸ್ಟೇನ್ ಸಚಿನ್ ದ್ವಿಶತಕ ಸಿಡಿಸುವ ಮೊದಲೇ ಔಟಾಗಿದ್ದರು. ಆದರೆ ಅಂಪೈರ್ ಇಯಾನ್ ಗೌಲ್ಡ್ ನನ್ನ ಮನವಿಯನ್ನು ಪುರಸ್ಕರಿಸಲಿಲ್ಲ ಎಂದು ಹೇಳಿದ್ದಾರೆ.

ಸ್ಟೇನ್ ಹೇಳಿದ್ದೇನು..?
ಗ್ವಾಲಿಯರ್ ನಲ್ಲಿ ನಡೆದ ಪಂದ್ಯದಲ್ಲಿ ಸಚಿನ್ ಮೊದಲ ದ್ವಿಶತಕ ಸಿಡಿಸಿದ್ದರು. ಈ ವೇಳೆ 190 ರನ್ ಗಳಿಸಿದ ಸಂದರ್ಭದಲ್ಲಿ ಸಚಿನ್ ಎಲ್ ಬಿಯಾಗಿದ್ದರು. ಈ ವಿಚಾರ ಅಂಪೈರ್ ಇಯಾನ್ ಗೌಲ್ಡ್ ಗೆ ತಿಳಿದಿತ್ತು. ಪ್ರೇಕ್ಷಕರ ಕೂಗಾಟಕ್ಕೆ ಹೆದರಿ ನಾಟೌಟ್ ನೀಡಿದ್ದರು. ಪಂದ್ಯ ಮುಗಿದ ಬಳಿಕ ನಾನು ನೇರವಾಗಿ ಅಂಪೈರ್ ಬಳಿ ಹೋಗಿ, ಯಾಕೆ ನನ್ನ ಮನವಿಯನ್ನು ಪುರಸ್ಕರಿಸಲಿಲ್ಲ ಎಂದು ಪ್ರಶ್ನಿಸಿದೆ. ಇದಕ್ಕೆ ಇಯಾನ್ ಗೌಲ್ಡ್, ಸುತ್ತಲೂ ಒಮ್ಮೆ ನೋಡಿ ಔಟ್ ತೀರ್ಪು ನೀಡಿದ್ದರೆ ನಾನು ಹೋಟೆಲಿಗೆ ಮರಳುತ್ತಿರಲಿಲ್ಲ ಎಂದು ಉತ್ತರಿಸಿದ್ದ ವಿಚಾರವನ್ನು ಈಗ ಸ್ಟೇನ್ ನೆನಪು ಮಾಡಿಕೊಂಡಿದ್ದಾರೆ.

ಇನ್ನು ಅಂದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 50 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 401 ರನ್ ಗಳಿಸಿತ್ತು.

ಸೆಹ್ವಾಗ್ 9, ದಿನೇಶ್ ಕಾರ್ತಿಕ್ 79, ಯೂಸೂಫ್ ಪಠಾನ್ 36, ಧೋನಿ ಔಟಾಗದೇ 68 ರನ್( 35 ಎಸೆತ, 7 ಬೌಂಡರಿ, 4 ಸಿಕ್ಸರ್) ಹೊಡೆದಿದ್ದರು. ಆರಂಭಿಕನಾಗಿ ಕಣಕ್ಕೆ ಇಳಿದಿದ್ದ ಸಚಿನ್ ಔಟಾಗದೇ 147 ಎಸೆತದಲ್ಲಿ 200 ರನ್ ಹೊಡೆದಿದ್ದರು. ಈ ವಿಶ್ವ ದಾಖಲೆಯ ಇನ್ನಿಂಗ್ಸ್ ನಲ್ಲಿ 3 ಸಿಕ್ಸರ್, 25 ಬೌಂಡರಿಯನ್ನು ಹೊಡೆದಿದ್ದರು. 100 ರನ್ ರನ್ ಗಳು ಬೌಂಡರಿ ಮೂಲಕವೇ ಬಂದಿತ್ತು.
ಇನ್ನು ಭಾರತ ನೀಡಿದ್ದ ಕಠಿಣ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ 42.5 ಓವರ್ ಗಳಲ್ಲಿ 248 ರನ್ ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಭಾರತ 153 ರನ್ ಗಳಿಂದ ಜಯಗಳಿಸಿತ್ತು.

 

-ಮಹೇಶ್ ಎಂ

Tags: Sachin Tendulkar
ShareTweetSendShare
Join us on:

Related Posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram