ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಸದಾನಂದಗೌಡ ಶಿಫ್ಟ್
ಚಿತ್ರದುರ್ಗ : ಚಿತ್ರದುರ್ಗದಲ್ಲಿ ಅಸ್ವಸ್ಥಗೊಂಡಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.
ಶಿವಮೊಗ್ಗದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿದ್ದ ಸದಾನಂದ ಗೌಡ, ಬೆಂಗಳೂರಿನಲ್ಲಿ ನಡೆಯಲಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಚಿತ್ರದುರ್ಗ ಮೂಲಕ ಬೆಂಗಳೂರಿಗೆ ಹೊರಟಿದ್ದರು.
ಮಾರ್ಗ ಮಧ್ಯೆ ಚಿತ್ರದುರ್ಗದಲ್ಲಿ ಅವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ನವೀನ್ ಹೋಟೆಲ್ ಬಳಿ ಸದಾನಂದ ಗೌಡ ಕಾರಿನಿಂದ ಇಳಿಯುವ ವೇಳೆ ಅಸ್ವಸ್ಥರಾಗಿದ್ದರು.
ಗಾಜಿಯಾಬಾದ್ : ಗೋಡೆ ಕುಸಿದು ಐದು ಮಂದಿ ಸಾವು
ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು.
ಚಿಕಿತ್ಸೆ ಬಳಿಕ ಅವರು ತುಸು ಚೇತರಿಸಿಕೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









