ಬೆಂಗಳೂರು: ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಸದಾನಂದ ಗೌಡ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದು, ಕಾಂಗ್ರೆಸ್ ವ್ಯಂಗ್ಯವಾಡಿದೆ.
ಬಿಜೆಪಿ ಹೈಕಮಾಂಡ್ ನಾಯಕರನ್ನು ಕರೆಸಿ ಅವಮಾನಿಸಿ ಕಳುಹಿಸಿದ್ದಾರೆ. ನೊಂದ ಸದಾನಂದಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಅಲ್ಲದೇ, ಈ ವಿಷಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಎಳೆತಂದು “ಮತ್ತೆ ಅವಮಾನವಾಗುವ ಸುಳಿವನ್ನು ಅರಿತು ಗುಡ್ಬೈ ಹೇಳಿದ್ದಾರೆ” ಎಂದು ವ್ಯಂಗ್ಯವಾಡಲಾಗಿದೆ.
ಸಂತೋಷ್ ಅವರ ಬಗ್ಗೆ ಕಾಂಗ್ರೆಸ್ ಸಂತೋಷ್ ಕೂಟ ಏರ್ಪಡಿಸಿ ಎಂದು ಕಾಲೇಳೆಯುವ ಕೆಲಸ ಮಾಡಿದೆ. “ಸಂತೋಷ ಕೂಟ”ದ ದಾಳಕ್ಕೆ ಮುಂದಿನ ಲೋಕಸಭೆಯ ಟಿಕೆಟ್ ಸಿಗದೆ ಮತ್ತೊಮ್ಮೆ ಅವಮಾನವಾಗುವ ಸುಳಿವನ್ನು ಅರಿತು ಈಗಲೇ ಗುಡ್ ಬೈ ಹೇಳಿದ್ದಾರೆ ಎಂದು ಕಾಂಗ್ರೆಸ್ ಕಿಚಾಯಿಸಿದೆ.