ಕೊರೊನಾ ಸಂಕಷ್ಟ – ಆರ್ಕೇಸ್ಟ್ರಾ ಕಲಾವಿದರ ನೆರವಿಗೆ ಬಂದು ಸಾಧುಕೋಕಿಲಾ
ದೇಶ ಹಾಗೂ ರಾಜ್ಯದಲ್ಲಿ ಕೋವಿಡ್ 2ನೇ ಅಲೆಯ ಪರಿಣಾಮ ಅತ್ಯಂತ ಭೀಕರವಾಗಿದೆ.. ರಾಜ್ಯದಲ್ಲಿ 2ನೇ ಅಲೆ ತಡೆಗೆ ಲಾಕ್ ಡೌನ್ ವಿಧಿಸಲಾಗಿದೆ.. ಇದ್ರಿಂದಾಗಿ ದಿನಗೂಲಿ ಕಾರ್ಮಿಕರು , ಬಡವರು ತೊಂದರೆ ಅನುಭವಿಸುತ್ತಿದ್ದಾರೆ. ಮತ್ತೊಂದೆಡೆ ಚಿತ್ರರಂಗದ ಚಟುವಿಟಿಗಳು ನಿಂತುಹೋಗಿದ್ದು, ಕಾರ್ಮಿಕರು, ಕಲಾವಿಧರು ಸಹ ತೊಂದರೆ ಅನುಭವಿಸುತ್ತಿದ್ದಾರೆ. ಆದ್ರೆ ಕಿಚ್ಚ ಸುದೀಪ್ , ಶ್ರೀಮುರುಳಿ, ಉಪೇಂದ್ರ ಸೇರಿದಂತೆ ಅನೇಕ ಸಿನಿಮಾ ತಾರೆಯರು ಬಡವರಿಗೆ ನೆರವಾಗ್ತಿದ್ದಾರೆ. ಇದೀಗ ಈ ಲಿಸ್ಟ್ ಗೆ ಕಾಮಿಡಿ ಕಿಂಗ್ ಸಾಧುಕೋಕಿಲ ಸೇರಿಕೊಂಡಿದ್ದಾರೆ.
ಆರ್ಕೇಸ್ಟ್ರಾದವರಿಗೆ ಪ್ರೋಗ್ರಾಂಗಳು ಸಿಕ್ಕಿದ್ರಷ್ಟೇ ಜೀವನ ನಡೆಯೋದು. ಈಗ ಯಾವ ಪ್ರೋಗ್ರಾಂಗಳು ನಡೀತಾ ಇಲ್ಲ. ಹೀಗಾಗಿ ಸಂಕಷ್ಟದಲ್ಲಿರುವ ಆರ್ಕೇಸ್ಟ್ರಾ ಕಲಾವಿದರಿಗೆ ಸಾಧುಕೋಕಿಲ ಸಹಾಯಕ್ಕೆ ನಿಂತಿದ್ದಾರೆ. ಸುಮಾರು ಎರಡೂವರೆ ಲಕ್ಷ ಹಣ ಖರ್ಚಿನಲ್ಲಿ ಆರ್ಕೇಸ್ಟ್ರಾ ಕಲಾವಿದರಿಗೆ ಆಹಾರ ಕಿಟ್ ಗಳನ್ನು ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಉಪೇಂದ್ರ ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.








