ಕೊರೊನಾ ಸಂಕಷ್ಟ : ಸಿನಿ ಕಾರ್ಮಿಕರ ನೆರವಿಗೆ ನಿಂತ ಸಾಯಿ ಕುಮಾರ್ ಸಹೋದರರು
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಮತ್ತೊಂದೆಡೆ ಲಾಕ್ ಡೌನ್ ನಿಂದಾಗಿ ಬಡವರು , ಸಿನಿಮಾ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ.. ಅನೇಕರು ಒಂದು ಹೊತ್ತಿನ ಊಟಕ್ಕೆ ಕಷ್ಟ ಪಡುವ ಪರಿಸ್ಥಿತಿ ಎದುರಾಗಿದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಉಪೇಂದ್ರ , ಪುನೀತ್ ರಾಜ್ ಕುಮಾರ್ , ಯಶ್, ದರ್ಶನ್, ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಇದೀಗ ಡೈಲಾಗ್ ಕಿಂಗ್ ಸಾಯಿಕುಮಾರ್ ಸಹೋದರರು ಕೂಡ ಸಿನಿಮಾ ಕಾರ್ಮಿಕರ ಸಹಾಯಕ್ಕೆ ನಿಂತಿದ್ದಾರೆ. ನಟ ರವಿಶಂಕರ್, ಅಯ್ಯಪ್ಪ ಪಿ ಶರ್ಮಾ ಕೊರೊನಾ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ನೆರವಾಗಿದ್ದಾರೆ. ಕರ್ನಾಟಕ ಚಲನಚಿತ್ರ ಒಕ್ಕೂಟಕ್ಕೆ 5 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಅವರ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಸಿನಿಮಾ ವಿಚಾರಕ್ಕೆ ಬಂದ್ರೆ ಸಾಯಿಕುಮಾರ್ ಹಾಗೂ ಸಹೋದರರು ಮೂವರು ಒಟ್ಟಾಗಿ ರೋರಿಂಗ್ ಸ್ಟಾರ್ ಶ್ರೀಮುರುಳಿ ನಟನೆಯ ಭರಾಟೆ ಸಿನಿಮಾದಲ್ಲಿ ಕಾಣಿಸಿಕೊಂಡು ಪ್ರೇಕ್ಷರನ್ನ ರಂಜಿಸಿದ್ದರು.. ಮೊದಲ ಬಾರಿಗೆ ಸಾಯಿಕುಮಾರ್, ರವಿಶಂಕರ್ ಮತ್ತು ಅಯ್ಯಪ್ಪ ಒಂದೇ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.. ಇನ್ನೂ ಅಯ್ಯಪ್ಪ ಕೆಜಿಎಫ್ ಸಿನಿಮಾದಲ್ಲಿ ವಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.. ರವಿಶಂಕರ್ ಸದ್ಯ ತ್ರಿಬಲ್ ರೈಡಿಂಗ್ ಸೇರಿದಂತೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ..
ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನಿಮಾದಲ್ಲೂ ರವಿಶಂಕರ್ ನಟಿಸಿದ್ದು, ಸಿನಿಮಾ ರಿಲೀಸ್ ಆಗಬೇಕಿದೆ. ಇತ್ತೀಚೆಗೆ ಅವರ ನಟನೆಯ ಪೊಗರು ಸಿನಿಮಾ ಕೂಡ ತೆರೆಕಂಡಿತ್ತು.. ಅಲ್ಲದೇ ರವಿಶಂಕರ್ ಕೊನೆಯದಾಗಿ ದರ್ಶನ್ ನಟನೆಯ ರಾಬರ್ಟ್ ಚಿತ್ರದಲ್ಲಿ ನಟಿಸಿದ್ದರು. ಇನ್ನೂ ಸಾಯಿ ಕುಮಾರ್ ಅವರು ಇತ್ತೀಚೆಗೆ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








