ಪಾಕಿಸ್ತಾನಕ್ಕಿಂತ ಭಾರತದಲ್ಲೇ ಮುಸ್ಲಿಮರ ಸಂಖ್ಯೆ ಹೆಚ್ಚು : ಬಿಜೆಪಿ ಸಂಸದ
ಕಾನ್ಪುರ : ಪಾಕಿಸ್ತಾನಕ್ಕಿಂತ ಭಾರತದಲ್ಲೇ ಮುಸ್ಲಿಮರ ಸಂಖ್ಯೆ ಹೆಚ್ಚಿದೆ ಎಂದು ಭಾರತೀಯ ಜನತಾ ಪಾರ್ಟಿ ಸಂಸದ ಸಾಕ್ಷಿ ಮಹಾರಾಜ್ ಹೇಳಿಕೆ ನೀಡಿದ್ದಾರೆ.
ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ಸಾಕ್ಷಿ ಮಹಾರಾಜ್, ಪಾಕಿಸ್ತಾನಕ್ಕಿಂತ ಭಾರತದಲ್ಲಿ ಹೆಚ್ಚು ಮುಸ್ಲಿಂ ಜನಸಂಖ್ಯೆ ಇದೆ. ಆದ್ದರಿಂದ ಭಾರತದಲ್ಲಿ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನವನ್ನು ತಕ್ಷಣದಿಂದಲೇ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಅಲ್ಲದೆ ಮುಸ್ಲಿಮರು ಈಗ ತಮ್ಮನ್ನು ಹಿಂದೂಗಳ ಕಿರಿಯ ಸಹೋದರರೆಂದು ಪರಿಗಣಿಸಿ ಅವರೊಂದಿಗೆ ದೇಶದಲ್ಲಿ ವಾಸಿಸಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ಹೆಚ್ಚುತ್ತಿರುವ ಜನಸಂಖ್ಯೆ ಬಗ್ಗೆ ಮಾತನಾಡಿ, ಜನಸಂಖ್ಯೆ ಹೆಚ್ಚುತ್ತಿರುವುದನ್ನು ಪರಿಶೀಲಿಸಲು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಸೂದೆ ಮಂಡಿಸಲಾಗುವುದು. ಈ ಮೂಲಕ ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರು ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ವಂಚಿತರಾಗುತ್ತಾರೆ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel